ಬೆಂಗಳೂರು:ದೇಶದ ಗಮನಸೆಳೆದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನ ಬಳಿಕ ಮತ್ತೋರ್ವ ಆರೋಪಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪುಲಕೇಶಿನಗರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಾಕೀರ್ ಬಂಧಿತ ಆರೋಪಿ.
ಮಾಜಿ ಮೇಯರ್ ಸಂಪತ್ ರಾಜ್​ ನ ಆಪ್ತನಾಗಿರುವ ಜಾಕೀರ್ ಗಲಭೆ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಿಸಿಬಿ ಪೊಲೀಸರು ಈತನಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಒಮ್ಮೆ ವಿಚಾರಣೆಗೆ ಹಾಜರಾಗಿದ್ದ ಜಾಕೀರ್ ಬಳಿಕ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ.
ಇದನ್ನೂ ಓದಿ:ಡಿಜೆ ಹಳ್ಳಿ ಗಲಭೆ​: ಬೆಂಗಳೂರಿನ 43 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ, ಮಾರಕಾಸ್ತ್ರ ಜಪ್ತಿ
ಜಾಕೀರ್ ಇರುವಿಕೆಯ ಸುಳಿವು ಪಡೆದ ಸಿಸಿಬಿ ಪೊಲೀಸರು ನಿನ್ನೆ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಜಾಕೀರ್​ನನ್ನು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಕೋವಿಡ್​ಗೆ ಬಲಿಯಾದ ಭೋಪಾಲ ಅನಿಲ ದುರಂತ ಸಂತ್ರಸ್ತರ ಸಂಖ್ಯೆ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 5 =
Remember me
