ಬೆಂಗಳೂರು:ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣ ರದ್ದು ಕೋರಿ ಸಂಪತ್ ರಾಜ್ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ, ಪ್ರಕರಣಕ್ಕೆ ತಡೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿ ಪುರಸ್ಕರಿಸಲು ನಿರಾಕರಿಸಿತು. ಪ್ರತಿವಾದಿಗಳಾದ ಸಿಸಿಬಿ ಪೊಲೀಸರು ಮತ್ತು ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್‌ಗೆ ನೋಟಿಸ್ ಜಾರಿಗೊಳಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಸಂಪತ್‌ರಾಜ್ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರಿಗೆ ಕರೊನಾ ಸೋಂಕು ತಗುಲಿತ್ತು. ಚಿಕಿತ್ಸೆ ಪಡೆದಿದ್ದರೂ ಆರೋಗ್ಯ ಇನ್ನೂ ಸುಧಾರಿಸಿಲ್ಲ. ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾದರೆ ಬಂಧಿಸುವ ಸಾಧ್ಯತೆ ಇದೆ. ಆದ್ದರಿಂದ, ಅವರ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್, ಸಿಸಿಬಿ ನೋಟಿಸ್ ನೀಡಿದ ಕೂಡಲೇ ಸಂಪತ್ ರಾಜ್ ಕೋವಿಡ್ ನೆಪ ನೀಡಿ ಆಸ್ಪತ್ರೆಗೆ ಸೇರುತ್ತಾರೆ. ನಾಲ್ಕೈದು ವಾರ ಚಿಕಿತ್ಸೆ ಪಡೆದು, ಮತ್ತೆ ಕರೋನಾ ಬಂದಿದೆ ಎಂದು ತಿಳಿಸಿ ಆಸ್ಪತ್ರೆಯಲ್ಲೇ ಉಳಿಯುತ್ತಾರೆ. ಆಸ್ಪತ್ರೆಯಿಂದ ಬಿಡುಗಡೆಯಾಗುವ ವೇಳೆ ಮಾಹಿತಿ ನೀಡಬೇಕೆಂದು ಸೂಚಿಸಲಾಗಿತ್ತಾದರೂ, ಅರ್ಜಿದಾರರು ಯಾವುದೇ ಮಾಹಿತಿ ನೀಡದೆ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಅರ್ಜಿದಾರರು ಮಾಜಿ ಮೇಯರ್ ಆಗಿದ್ದು, ತನಿಖೆಗೆ ಸಹಕರಿಸಬೇಕಿರುವುದು ಅವರ ಜವಾಬ್ದಾರಿಯಾಗಿದೆ. ಪ್ರಕರಣವಿನ್ನೂ ಆರಂಭಿಕ ಹಂತದಲ್ಲಿದ್ದು, ಅರ್ಜಿದಾರರ ವಿಚಾರಣೆ ನಡೆಸುವ ಅಗತ್ಯವಿದೆ. ಈ ಹಂತದಲ್ಲೇ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿದರೆ ಅಥವಾ ವಿಚಾರಣೆಗೆ ತಡೆ ನೀಡಿದರೆ ತನಿಖೆಗೆ ಅಡ್ಡಿಯಾಗಲಿದೆ. ಆದ್ದರಿಂದ ವಿಚಾರಣೆಗೆ ತಡೆ ನೀಡಬಾರದು ಎಂದು ಮನವಿ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eight =
Remember me
