ಬೆಂಗಳೂರು:ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಮನೆಗಳಿಗೆ ಸಿಸಿಬಿ ಪೊಲೀಸರು ಭಾನುವಾರ ನೋಟಿಸ್ ಅಂಟಿಸಿದ್ದಾರೆ.
ಪುಲಿಕೇಶಿನಗರದಲ್ಲಿರುವ ಮಾಜಿ ಮೇಯರ್‌ಗೆ ಸೇರಿದ 2 ಮನೆಗಳು ಹಾಗೂ ಅವರ ಅಕ್ಕ ಮನೆಗೂ ಸಿಸಿಬಿ ನೋಟಿಸ್ ಅಂಟಿಸಿದೆ. ಕರೊನಾ ಸೋಂಕು ನೆಪದಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಸಂಪತ್ ರಾಜ್ ದಿಢೀರ್ ನಾಪತ್ತೆಯಾಗಿದ್ದಾರೆ. ಆಸ್ಪತ್ರೆಯಿಂದ ತಪ್ಪಿಸಿಕೊಂಡಿರುವ ಮಾಜಿ ಮೇಯರ್‌ಗೆ ಬೆಂಗಳೂರು ನಗರ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿ ಸಿಸಿಬಿ ವಿಶೇಷ ತಂಡಗಳು ಹುಡುಕಾಟ ನಡೆಸಿವೆ.
ಈ ನೋಟಿಸ್ ನೋಡಿದ ಕೂಡಲೇ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕು. ತಪ್ಪಿದ್ದಲ್ಲಿ ಉದ್ದೇಶ ಪೂರ್ವಕವಾಗಿ ವಿಚಾರಣೆಗೆ ಸಹಕರಿಸುವುದಿಲ್ಲ ಎಂದು ಪರಿಗಣಿಸಿ ಕಾನೂನು ಕ್ರಮ ಜರುಗಿಸುವುದಾಗಿ ಸಿಸಿಬಿಯ ಭಯೋತ್ಪಾದನಾ ನಿಗ್ರಹ ದಳದ ಎಸಿಪಿ ಬಿ.ಆರ್. ವೇಣುಗೋಪಾಲ್ ಎಚ್ಚರಿಸಿದ್ದಾರೆ.
ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ವೇಳೆ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಸಂಪತ್ ರಾಜ್ ಆರೋಪಿಯಾಗಿದ್ದಾರೆ. ಒಂದು ಬಾರಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಮಾಜಿ ಮೇಯರ್‌ಗೆ 2ನೇ ಬಾರಿ ನೋಟಿಸ್ ನೀಡಿದ್ದರು. ಕರೊನಾ ಸೋಂಕು ನೆಪದಲ್ಲಿ ವಿಚಾರಣೆಗೆ ಗೈರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಪೊಲೀಸರ ಗಮನಕ್ಕೆ ತರದೆ ಆಸ್ಪತ್ರೆಯಿಂದ ಮಾಜಿ ಮೇಯರ್ ಡಿಸ್ಚಾರ್ಜ್ ಆಗಿ ನಾಪತ್ತೆಯಾಗಿದ್ದಾರೆ.
ತಮ್ಮನನ್ನು ಸ್ನಾನದ ಕೋಣೆಯಲ್ಲಿ ಕೂಡಿಹಾಕಿ ನೇಣಿಗೆ ಕೊರಳೊಡ್ಡಿದ ಅಕ್ಕ!

ಅಕ್ಕನ ಮನೆಗೆ ಬಾರದ ಬಾವ, ಸಿಟ್ಟಿಗೆದ್ದ ಬಾಮೈದ ಮಹಿಳೆಯನ್ನು ಕೊಂದುಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
