ಬೆಂಗಳೂರು:ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ದಾಂಧಲೆ ನಡೆಸಿದ್ದ ಪುಂಡರನ್ನು ಮಟ್ಟಹಾಕಲು ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಇಂದು(ಸೋಮವಾರ) ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಗೂಂಡಾ ಕಾಯ್ದೆ, ನಷ್ಟ ವಸೂಲಿ ಸೇರಿದಂತೆ ಹಲವು ಅಸ್ತ್ರ ಬಳಸುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಲಭೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆ ಕೋರರಿಂದ ವಸೂಲಿ ಮಾಡಲಾಗುವುದು. ಸುಪ್ರೀಂ ಕೋರ್ಟ್ ಆದೇಶದನ್ವಯ ಈ ಕ್ರಮವೆಂದು ಹೈಕೋರ್ಟಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಕಾನೂನು ಬದ್ಧವಾಗಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕ್ಲೈಂಟ್ ಕಮಿಷನರ್, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್​ಗಳನ್ನು ನೇಮಿಸಲಾಗುವುದು ಎಂದು ವಿವರಿಸಿದರು.
ಇದನ್ನೂ ಓದಿರಿಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!
ಗಲಭೆಕೋರರ ವಿರುದ್ಧ ಗೂಂಡಾ ಕಾಯ್ದೆ ಹಾಗೂ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ(UAPA) ಅಸ್ತ್ರ ಬಳಸಲಾಗುವುದು. ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ಅಬಾಧಿತ. ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.
Stringent action has been initiated against the culprits of DJ Halli and KG Halli violent incidents including invoking of the Unlawful Activities Prevention Act – UAPA Act. (2/3)
— B.S.Yediyurappa (@BSYBJP)August 17, 2020

ಈ ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ರಾಜ್ಯ ಗುಪ್ತ ವಾರ್ತೆಯ ಅಪರ ಮಹಾ ನಿರ್ದೇಶಕ ಬಿ. ದಯಾನಂದ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್, ಕಾನೂನು ಮತ್ತು ಸುವ್ಯವಸ್ಥೆಯ ಅಪರ ಮಹಾ ನಿರ್ದೇಶಕ ಅಮರ ಕುಮಾರ್ ಪಾಂಡೆ ಪಾಲ್ಗೊಂಡಿದ್ದರು.
https://www.facebook.com/DighvijayNews/videos/992487134533508/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
