ಬೆಂಗಳೂರು:ಡಿ.ಜೆ.ಹಳ್ಳಿ ಗಲಭೆಯಲ್ಲಿ ಪೊಲೀಸರ ಗುಂಡೇಟಿಗೆ ಮೂವರು ಯುವಕರು ಬಲಿಯಾಗಿದ್ದು, ಅವರ ಗುರುತು ಪತ್ತೆಯಾಗಿದೆ.
ಡಿ.ಜೆ.ಹಳ್ಳಿ ನಿವಾಸಿ ಯಾಸೀರ್ (19), ವಾಜಿದ್ (19) ಮೃತರು. ಇನ್ನೊಬ್ಬ ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ದಾಂಧಲೆ ನಡೆಸಿದ ಆರೋಪದಡಿ ಈವರೆಗೆ 137 ಮಂದಿಯನ್ನು ಬಂಧಿಸಲಾಗಿದ್ದು, ಮತ್ತಷ್ಟು ಆರೋಪಿಗಳಿಗಾಗಿ ಶೋಧ‌ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿರಿಡಿ.ಜೆ.ಹಳ್ಳಿ ಗಲಭೆ ಕುರಿತು ಕಾಂಗ್ರೆಸ್​ ನಾಯಕರು ಹೇಳಿದ್ದೇನು?
ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಪಾರ್ಕಿಂಗ್ ಸ್ಥಳದಲ್ಲಿದ್ದ 30ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸುಟ್ಟು ಕರಲಾಗಿವೆ. ಶಾಸಕ ಅಖಂಡ ಶ್ರೀನಿವಾಸ್​ ನಿವಾಸ, ಕಚೇರಿಸೇರಿದಂತೆ ಆ ಏರಿಯಾದ ಅಂಗಡಿಗಳು, ಪೊಲೀಸ್​ ಠಾಣೆ, ಪೊಲೀಸ್​ ವಾಹನ, ಸಾರ್ವಜನಿಕರ ವಾಹನಗಳಿಗೂ ಬೆಂಕಿ ಇಟ್ಟ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಹಿಂಸಾಚಾರಕ್ಕೆ ತಿರುಗಿದ ಗಲಭೆಯನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಹಾರಿಸಿದ ಗುಂಡೇಟು 15ಕ್ಕೂ ಗಲಭೆಕೋರರಿಗೆ ತಗುಲಿದ್ದು, ಆಸ್ಪತ್ರೆಯಲ್ಲಿ ‌ಏಳು‌ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಗಾಯಾಳುಗಳು ಮನೆಯಲ್ಲೇ ಅಡಗಿರುವ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ವಾತಾವರಣ ಪ್ರಕ್ಷ್ಯುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ಮುಂಬೈಯಿಂದ ಮೂರು ಕ್ಷಿಪ್ರ ಕಾರ್ಯಪಡೆ ನಗರಕ್ಕೆ ಆಗಮಿಸಿದ್ದು, ನಗರದಲ್ಲಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್​ಭೈರಸಂದ್ರದ ರಸ್ತೆಯುದ್ದಕ್ಕೂ ಪೊಲೀಸ್​ ಬಂದೋಬಸ್ತ್ ಮಾಡಲಾಗಿದ್ದು, ಕಿಡಿಗೇಡಿಗಳು ಸುಟ್ಟು ಹಾಕಿರುವ ವಾಹನಗಳನ್ನು ಪೊಲೀಸರು ರಸ್ತೆಬದಿಯಲ್ಲಿ ಹಾಕಿದ್ದಾರೆ. ಇಡೀ ಪ್ರದೇಶದಲ್ಲಿ ವಾಹನಗಳ ಓಡಾಟ ಮಿತಿಗೊಳಿಸಲಾಗಿದ್ದು, ಪ್ರತಿಯೊಂದು ವಾಹನವನ್ನೂ ತಪಾಸಣೆ ಮಾಡಿ ಬಿಡಲಾಗುತ್ತಿದೆ‌.
ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ಶರಣಪ್ಪ, ರಾಹುಲ್ ಕುಮಾರ್ ಶಹಪುರ್‌ವಾಡ, ರವಿಕುಮಾರ್ ಸೇರಿ ಮತ್ತಿತರ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
https://www.facebook.com/VVani4U/videos/602324063988861/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
