ಬೆಂಗಳೂರು:ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರಿಜ್ವಾನ್​ ಅರ್ಷದ್​ ಮತ್ತು ಚಾಮರಾಜಪೇಟೆ ಶಾಸಕ ಜಮೀರ್​ ಅಹಮದ್​ ಖಾನ್​ ಅವರು ರಾಷ್ಟ್ರೀಯ ತನಿಖಾ ತಂಡದ(ಎನ್​ಐಎ) ವಿಚಾರಣೆ ಎದುರಿಸಿದ್ದಾರೆ.
ಎನ್​ಐಎ ತನಿಖಾ ಸಂಸ್ಥೆ ಅಧಿಕಾರಿಗಳು ರಿಜ್ವಾನ್​ ಅರ್ಷದ್​ ಹಾಗೂ ಜಮೀರ್​ಗೆ ದೂರವಾಣಿ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ದೊಮ್ಮಲೂರಿನಲ್ಲಿರುವ ಎನ್​ಐಎ ಕಚೇರಿಗೆ ಅ.12ರಂದು ರಿಜ್ವಾನ್​ ಅರ್ಷಾದ್​ ಹಾಜರಾದರೆ, ಅ.13ರಂದು ಜಮೀರ್​ ಹಾಜರಾಗಿ ಅಧಿಕಾರಿಗಳಿಗೆ ಈ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ.
ಎನ್​ಐಎ ತಂಡ ಕೆಲವು ಪ್ರಶ್ನೆಗಳನ್ನು ಜಮೀರ್​ ಹಾಗೂ ರಿಜ್ವಾನ್​ ಮುಂದಿಟ್ಟಿದ್ದರು. ಗಲಭೆ ನಡೆದ ಬಗ್ಗೆ ನಿಮಗೆ ಮಾಹಿತಿ ತಿಳಿದಿದ್ದು ಹೇಗೆ ? ಗಲಭೆ ಬಗ್ಗೆ ನಿಮ್ಮ ಅಭಿಪ್ರಾಯವೇನು? ಇದು ಪೂರ್ವ ನಿಯೋಜಿತ ಅಂತ ನಿಮಗೆ ಅನ್ನಿಸಿದೆಯಾ? ಗಲಭೆ ಹಿಂದೆ ಯಾರೆಲ್ಲ ಇದ್ದಾರೆ ? ಎಂಬಿತ್ಯಾದಿ ಪ್ರಶ್ನೆಗಳನ್ನು ಎನ್​ಐಎ ತಂಡ ಕೇಳಿದೆ. ನಂತರ ಇವರು ನೀಡಿದ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್​ಐಎ, ಸದ್ಯದಲ್ಲೇ ಇನ್ನೂ ಹಲವರನ್ನು ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
ಮಾಹಿತಿ ನೀಡಿದ್ದೇವೆ:ಈ ಕುರಿತು ‘ವಿಜಯವಾಣಿ’ ಜತೆ ಮಾತನಾಡಿದ ಶಾಸಕ ರಿಜ್ವಾನ್​ ಅರ್ಷಾದ್​, ಗಲಭೆ ನಡೆದಾಗ ರಾತ್ರಿ ಏನೆಲ್ಲ ನಡೆದಿದೆ ಎಂಬ ಬಗ್ಗೆ ಎನ್​ಐಎ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ನನಗೆ ಗೊತ್ತಿರುವ ಮಾಹಿತಿ ನೀಡಿದ್ದೇನೆ. ಜಮೀರ್​ ಅವರಿಂದಲೂ ಮಾಹಿತಿ ಕಲೆ ಹಾಕಿದ್ದಾರೆ. ಮುಂದೆಯೂ ಎನ್​ಐಎ ತನಿಖೆಗೆ ಸಹಕರಿಸುತ್ತೇವೆ. ಗಲಭೆ ವೇಳೆ ಕರ್ತವ್ಯದಲ್ಲಿದ್ದ ಅಧಿಕಾರಿಗಳಿಂದಲೂ ಎನ್​ಐಎ ಮಾಹಿತಿ ಕಲೆ ಹಾಕುವ ಸಾಧ್ಯತೆಗಳಿವೆ ಎಂದರು.
ಗಲಭೆ ವೇಳೆ ಹಿರಿಯ ಪೊಲೀಸ್​ ಅಧಿಕಾರಿಗಳು ಸ್ಥಳಕ್ಕೆ ಬಂದು ಗಲಭೆ ನಿಯಂತ್ರಿಸಲು ಸಹಕರಿಸುವಂತೆ ಕೋರಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೋಗಿದ್ದೆವು. ಸ್ವಲ್ಪ ಹೊತ್ತು ಗಲಭೆ ನಿಯಂತ್ರಿಸಲು ಪ್ರಯತ್ನಿಸಿದ್ದೆವು. ಅದಾಗಲೇ ಪರಿಸ್ಥಿತಿ ಕೈ ಮೀರಿ ಹೋಗಿತ್ತು. ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಆಗಬೇಕು. ಇದರಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ತಪ್ಪಿತಸ್ಥರು ಯಾರೇ ಇದ್ದರೂ ಶಿಕ್ಷೆಯಾಗಬೇಕು ಎಂದರು.
12 ಕೋಟಿ ಸಂಪತ್ತಿನ ಒಡತಿ ಕುಸುಮಾ, ಅಫಿಡವಿಟ್​ನಲ್ಲಿ ಪತಿಯ ಹೆಸರನ್ನು ಪ್ರಸ್ತಾಪಿಸಿಯೇ ಇಲ್ಲ!

ಸತ್ಯನಾರಾಯಣ ಸತ್ತಾಯಿತು, ಜಯಚಂದ್ರಾನು ಸಾಯ್ತಾನೆ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
