ಬೆಂಗಳೂರು:ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಆರೋಪಿ ನವೀನ್​ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿಯ ಸೋದರಳಿಯ ನವೀನ್​ ಫೇಸ್​ಬುಕ್​ನಲ್ಲಿ ಇಸ್ಲಾಂ ಧರ್ಮಗುರುವಿನ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದನ್ನೇ ನೆಪಮಾಡಿಕೊಂಡ ಪುಂಡರು ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್​ ಭೈರಸಂದ್ರದಲ್ಲಿ ದಾಂಧಲೆ ನಡೆಸಿ ಪೊಲೀಸ್​ ಠಾಣೆ, ಶಾಸಕರ ನಿವಾಸ, ಕಂಡ ಕಂಡ ವಾಹನಕ್ಕೆಲ್ಲ ಬೆಂಕಿ ಇಟ್ಟು ಗಲಭೆ ಸೃಷ್ಟಿಸಿದ್ದರು.
ಅವಹೇಳನಕಾರಿ ಪೋಸ್ಟ್​ ಹಾಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ನವೀನ್​ನನ್ನು ಅರೆಸ್ಟ್ ಮಾಡಿದ್ದರು. ಜಾಮೀನು ಕೋರಿ ನವೀನ್​ ಸಲ್ಲಿದ್ದ ಅರ್ಜಿಯನ್ನು ಬುಧವಾರ ಕೈಗೆತ್ತಿಕೊಂಡಿದ್ದ ಹೈಕೋರ್ಟ್​, 2 ಲಕ್ಷ ರೂ. ಮೌಲ್ಯದ ಬಾಂಡ್​, ಅಷ್ಟೇ ಮೊತ್ತದ ಇಬ್ಬರ ಶ್ಯೂರಿಟಿ, ಸಾಕ್ಷ್ಯ ನಾಶಪಡಿಸದಂತೆ ತಾಕೀತು, ಕೋರ್ಟ್​ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ಎಲ್ಲಿಗೂ ಹೋಗುವಂತಿಲ್ಲ, ಪ್ರತಿ ತಿಂಗಳು 1ನೇ ತಾರೀಖು ಪೊಲೀಸ್​ ಠಾಣೆಗೆ ಹೋಗಿ ಹಾಜರಿ ಹಾಕಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಿದೆ. ಇಂತಹದ್ದೇ ಪ್ರಕರಣದಲ್ಲಿ ಮತ್ತೆ ಭಾಗಿಯಾಗಿದ್ದು ಕಂಡುಬಂದರೆ ಜಾಮೀನು ರದ್ದಾಗಲಿದೆ ಎಂದು ಇದೇ ವೇಳೆ ಕೋರ್ಟ್​ ಸ್ಪಷ್ಟಪಡಿಸಿದೆ.
‘ಈ ಕೃತ್ಯ ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ. ಸಾಮಾಜಿಕ ಜಾಲತಾಣದಲ್ಲಿ ಬಂದದ್ದನ್ನೇ ನವೀನ್​ ಶೇರ್​ ಮಾಡಿಕೊಂಡಿದ್ದರು. ಇದು ಇಷ್ಟೊಂದು ಗಂಭೀರ ಆಗಲಿದೆ ಎಂಬ ಅರಿವೂ ಅವರಿಗೆ ಇರಲಿಲ್ಲ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಆ ಪೋಸ್ಟ್ ಅನ್ನು ಕೂಡಲೇ ಡಿಲೀಟ್​ ಮಾಡಿದ್ದಾರೆ’ ಎಂದು ನವೀನ್​ ಪರ ವಕೀಲರು ವಾದ ಮಂಡಿಸಿದ್ದರು.
ಡಿಜೆ ಹಳ್ಳಿ-ಕೆಜೆ ಹಳ್ಳಿ ಗಲಭೆ ವೇಳೆ ಪೊಲೀಸ್​ ಕಸ್ಟಡಿಯಲ್ಲಿ ನವೀನ್​ ಇದ್ದ. ಮಹಜರ್​ಗೆಂದು ಆತನನ್ನು ಕರೆತರುವ ತನಕ ಹೊರ‌ಜಗತ್ತಿನ‌ ಮಾಹಿತಿ ಇರಲಿಲ್ಲ. ಸುಟ್ಟು ಕರಕಲಾಗಿದ್ದ ಮನೆಯನ್ನ ಕಂಡ ಆತ ಬಿಕ್ಕಿಬಿಕ್ಕಿ ಅತ್ತಿದ್ದ. ಆ ಒಂದು ಪೋಸ್ಟ್ ಇಂತಹ ದೊಡ್ಡ ಆಘಾತಕ್ಕೆ ಕಾರಣ ಆಗುತ್ತೆ ಅಂತ ಗೊತ್ತಿರಲಿಲ್ಲ ಎಂದು ಕಣ್ಣೀರು ಸುರಿಸಿದ್ದ.
ಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + two =
Remember me
