ಬೆಂಗಳೂರು:ಪ್ರತಿಷ್ಠಿತ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧೆ ಬಹುತೇಕ ಖಚಿತವಾಗಿದೆ.
ಆರ್.ಆರ್.ನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿದ್ದ ಕಾಂಗ್ರೆಸ್ ಪಕ್ಷ ಕುಸುಮಾ ತಂದೆ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಹನುಮಂತರಾಯಪ್ಪ ಸಹ ಮಗಳನ್ನು ಕಣಕ್ಕಿಳಿಸುವ ಸಂಬಂಧ ಇತ್ತೀಚೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ್ದರು. ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ಮಾಜಿ ಸ್ಪೀಕರ್ ರಮೇಶ್​ಕುಮಾರ್ ಜತೆಗೂಡಿ ಹನುಮಂತರಾಯಪ್ಪ ಮನೆಗೆ ಹೋಗಿ ಚರ್ಚೆ ನಡೆಸಿದರು.
ಇಂದು ಕಾಂಗ್ರೆಸ್​ಗೆ ಸೇರ್ಪಡೆ:ಹಿಂದೆ ಕಾಂಗ್ರೆಸ್​ನಲ್ಲಿಯೇ ಇದ್ದ ಹನುಮಂತರಾಯಪ್ಪ ನಂತರ ಜೆಡಿಎಸ್ ಸೇರಿದ್ದರು. ಇದೀಗ ವಾಪಸ್ ಬರಲು ಸಿದ್ಧರಾಗಿದ್ದು, ಶಿವಕುಮಾರ್ ಜತೆ ಚರ್ಚೆ ನಡೆಸಿದರು. ಭಾನುವಾರ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಮ್ಮುಖದಲ್ಲಿ ಹನುಮಂತರಾಯಪ್ಪ ಹಾಗೂ ಕುಸುಮಾ ಕಾಂಗ್ರೆಸ್​ಗೆ ಸೇರ್ಪಡೆಯಾಗಲಿದ್ದಾರೆ.
ಹನುಮಂತರಾಯಪ್ಪ ಅವರೊಂದಿಗೆ ಚರ್ಚೆಯ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಭಾನುವಾರ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಹನುಮಂತರಾಯಪ್ಪ ಹಾಗೂ ಕುಸುಮಾ ಅವರಿಗೆ ಸದಸ್ಯತ್ವ ನೀಡಲಿದ್ದೇವೆ ಎಂದರು.
ಆರ್.ಆರ್.ನಗರ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆ ಸಮಿತಿ ಅಭ್ಯರ್ಥಿ ಯಾರು ಎಂಬುದನ್ನು ಅಂತಿಮಗೊಳಿಸಲಿದೆ ಎಂದರು. ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಹೇಳಿದ್ದೆವು, ಕುಸುಮಾ ಅವರು ಅಚ್ಚರಿಯ ಅಭ್ಯರ್ಥಿ ಹೌದೋ ಅಲ್ಲವೋ ಎಂದು ಪ್ರಶ್ನಿಸುವ ಮೂಲಕ ಪರೋಕ್ಷವಾಗಿ ಕುಸುಮಾ ಅವರೇ ಅಭ್ಯರ್ಥಿ ಎಂಬುದನ್ನು ಹೇಳಿದರು.
ಅಪಸ್ವರ
ಡಿ.ಕೆ.ರವಿ ತಾಯಿ ಗೌರಮ್ಮ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಕುಸುಮಾ ಸ್ಪರ್ಧೆಗೆ ಕಾಂಗ್ರೆಸ್​ನಲ್ಲಿಯೂ ಕೆಲವರು ಅಪಸ್ವರ ತೆಗೆದಿದ್ದಾರೆಂದು ಹೇಳಲಾಗುತ್ತಿದೆ. ಚುನಾವಣೆಯ ಸಂದರ್ಭದಲ್ಲಿ ಗೌರಮ್ಮ ಇದೇ ಮಾತನ್ನು ಹೇಳಿದರೆ ಪಕ್ಷ ಮುಜುಗರ ಅನುಭವಿಸಬೇಕಾಗುತ್ತದೆ. ಆದ್ದರಿಂದ ಪಕ್ಷದಲ್ಲಿಯೇ ಯಾರಾದರೂ ಒಬ್ಬರನ್ನು ನಿಲ್ಲಿಸಿ ಎಂಬ ಒತ್ತಾಯವನ್ನು ಕೆಲವರು ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + fourteen =
Remember me
