ಬೆಂಗಳೂರು:ಬಿಬಿಎಂಪಿ ಗುಣಮಟ್ಟ ಪರಿಶೀಲನಾ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಭವಿಸಿದಂತೆ ತನಿಖೆಗೂ ಮುನ್ನ ಯಾರು ಅಂತಿಮ ನಿರ್ಧಾರ ಮಾಡಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿನಂತಿಸಿದ್ದಾರೆ.
ದುರ್ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಹಾಗೂ ಪೊಲೀಸರನ್ನು ಒಳಗೊಂಡ ಸಮಿತಯೊಂದನ್ನು ರಚಿಸಲಾಗಿದೆ. ಅವರು ನೀಡುವ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕ್ಯಾಂಟರ್​ಗೆ ಡಿಕ್ಕಿ ಹೊಡೆದ ಆಂಬುಲೆನ್ಸ್​; ನರ್ಸ್​ ಮೃತ್ಯು
ಬಿಬಿಎಂಪಿ ಗುಣಮಟ್ಟ ಪರಿಶೀಲನಾ ಪ್ರಯೋಗಾಲಯ ಇದ್ದ ಜಾಗ ಸೂಕ್ತವಾಗಿರಲಿಲ್ಲ. ಇಂತಹ ಪ್ರಯೋಗಾಯಲಗಳನ್ನು ಈ ಜಾಗದಲ್ಲಿ ಇಟ್ಟಿರುವುದು ತಪ್ಪು. ಪ್ರಯೋಗಾಲಯಗಳು ಮುಕ್ತ ಪ್ರದೇಶದಲ್ಲಿ ಇರಬೇಕು. ಈ ಹಿಂದೆ ಇಂತಹ ಅಗ್ನಿ ಅವಘಡಗಳು ನಡೆದು ಹಗರಣಗಳನ್ನು ಮುಚ್ಚಿಹಾಕಲು ಫೈಲ್​ಗಳನ್ನು ಸುಟ್ಟಿಹಾಕಿರುವ ಅನೇಕ ಉದಾಹರಣೆಗಳಿವೆ. ಈ ಬಾರಿ ಅದೇ ರಿತಿಯಾಗಿದ್ದು, ಕಡತಗಳಿಗೆ ಯಾವುದೇ ಹಾನಿಯಾಗಿಲ್ಲ. ಅವುಗಳನ್ನೂ ಬಹಳ ಜಾಗರೂಕತೆಯಿಂದ ಸ್ಥಳಾಂತರ ಮಾಡಿಸುವ ಬಗ್ಗೆ ಪ್ರಯತ್ನಿಸಲಾಗುತ್ತಿದೆ.
ಕೆಪಿಸಿಸಿ ಟ್ವಿಟರ್​ ಖಾತೆಯಿಂದ ಪೂರ್ವನಿಯೋಜಿತ ಕೃತ್ಯ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ನಾನು ಆ ಆರೋಪವನ್ನು ಹಿಂಪಡೆಯುತ್ತೇನೆ. ಪ್ರಕರಣದ ತನಿಖೆ ಮುಗಿಯುವವರೆಗೂ ಯಾವುದೇ ನಿರ್ಧಾರಕ್ಕೆ ಬರುವುದು ಬೇಡ. ತನಿಖೆ ಮುಗಿದು ವರದಿ ಕೈ ಸೇರಲಿ ಆ ನಂತರ ತೀರ್ಮಾನ ಮಾಡೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅಗ್ನಿ ಅವಘಡದ ತನಿಖೆ ಕುರಿತು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + twelve =
Remember me
