ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ತಡೆಹಿಡಿದಿರುವ ಎಲ್ಲಾ ಕಾಮಗಾರಿಗಳನ್ನು ಪರಿಶೀಲಿಸಿದೆ ಬಳಿಕವೇ ಹಣ ಬಿಡುಗಡೆ ಮಾಡಲಾಗುವುದು. ಪರಿಶೀಲನೆ ನಡೆಸದೆ ಯಾವುದೇ ಕಾಮಗಾರಿಯ ಬಿಲ್​ ಪಾವತಿ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ಧಾರೆ.
ಬುಧವಾರ ವಿಕಾಸಸೌಧದಲ್ಲಿಬ್ರ್ಯಾಂಡ್ ಬೆಂಗಳೂರುವೆಬ್​ಸೈಟ್​ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಡಿಕೆಶಿ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳಲ್ಲಿ ಏನೆಲ್ಲ ನಡೆದಿದೆ ಎಂಬುದು ಗೊತ್ತಿದೆ. ಗುತ್ತಿಗೆದಾರರು ಎಷ್ಟು ಜೋರಾಗಿ ಬೇಕಾದರೂ ಕೂಗಾಡಲಿ ಯಾವುದಕ್ಕೂ ಜಗ್ಗುವುದಿಲ್ಲ ಎಂದಿದ್ದಾರೆ.
ರಾಜರಾಜೇಶ್ವರಿನಗರ ವಲಯದಲ್ಲಿ ಕಾಮಗಾರಿ ನಡೆಸದೆ ನೂರಾರು ಕೋಟಿ ರೂಪಾಯಿ ಬಿಲ್​ ಪಾವತಿಸಿರುವುದು ಲೋಕಾಯುಕ್ತ ತನಿಖೆ ವೇಳೆ ಬೆಳಕಿಗೆ ಬಂದಿದೆ. ಬೇರೆ ಕಡೆಗಳಲ್ಲಿ ಏನು ನಡೆದಿದೆ ಎಂಬುದು ನೋಡಬೇಕಲ್ಲವೇ ಎಂದು ಪ್ರಶ್ನಿಸಿದ್ಧಾರೆ.
ಭೌತಿಕ ಸ್ಥಿತಿ ಪರಿಶೀಲಿಸದೆ ಬಿಲ್​ ಪಾವತಿ ಮಾಡಲು ಅವಕಾಶ ನೀಡುವುದಿಲ್ಲ. ಬಿಡಿಎ ಮತ್ತು ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(SIT)ವನ್ನು ರಚಿಸಬೇಕಿದೆ. ಸೂಕ್ತ ಕಾಲದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:VIDEO| ಸೀಟಿಗಾಗಿ ಬಡಿದಾಡಿಕೊಂಡ ಮಹಿಳೆಯರು; ಬಸ್​ನಲ್ಲಿ ನಾರಿಶಕ್ತಿ ಅನಾವರಣ ಎಂದ ನೆಟ್ಟಿಗರು
ಘನತ್ಯಾಜ್ಯ ನಿರ್ವಹಣೆ, ಸಂಚಾರ ದಟ್ಟಣೆ, ನೀರು ಪೂರೈಕೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬದಲಾವಣೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಸಾಋ್ವಜನಿಕರು, ತಜ್ಞರು, ವಿವಿಧ ಕ್ಷೇತ್ರಗಳ ಪ್ರಮುಖರ ಅಭಿಪ್ರಾಯಗಳನ್ನು ಸಂಗ್ರಹಿಸಿ ಯೋಜನೆಗಳನ್ನು ರೂಪಿಸಲಾಗುವುದು. BWSSBಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ನೀರಿನ ಬಿಲ್​ ದರ ಪರಿಷ್ಕರಣೆ ಆಗಿಲ್ಲ. ಈ ಬಗ್ಗೆಯೂ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು.
ಬೆಂಗಳೂರು ಅಭಿವೃದ್ದಿ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ವೆಬ್​ಸೈಟ್​ ಮೂಲಕ ತಿಳಿಸಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − seven =
Remember me
