ಬೆಂಗಳೂರು:ಕಾವರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಬಿಕ್ಕಟ್ಟಿಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ. ಈ ವಿಚಾರದಲ್ಲಿ ರಾಜಕಾರಣ ಮಾಡುವುದರಲ್ಲಿ ಯಾವುದೇ ಪ್ರಯೋಜನವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.
ಕಾವೇರಿ ನೀರಿಗಾಗಿ ಅನೇಕ ಸಂಘಟನೆಗಳು ಹೋರಾಟ ನಡೆಸುತ್ತಿರುವುದು ಒಳ್ಳೆಯ ವಿಚಾರ. ಆದರೆ, ನಾವು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು. ಯೋಜನೆ ಜಾರಿ ಮಾಡುವಂತೆ ಏಕೆ ಈ ಸಂಘಟನೆಗಳು ಆಗ್ರಹಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾತನಾಡುತ್ತಿರುವ ಸಂಘಟನೆಗಳಾಗಲಿ, ಬಿಜೆಪಿ-ಜೆಡಿಎಸ್​ ನಾಯಕರಾಗಲಿ ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರವನ್ನು ಏಕೆ ಆಗ್ರಹಿಸುತ್ತಿಲ್ಲ. ಇದುವರೆಗೂ ಪರಿಸರ ಇಲಾಖೆಯಿಂದ ಯಾಕೆ ಅನುಮತಿ ಕೊಡಿಸಿಲ್ಲ. ನಮ್ಮ ವಿರುದ್ಧ ಮಾತನಾಡುತ್ತಿರುವವರು ಕೇಂದ್ರ ಸರ್ಕಾರದ ವಿರುದ್ದ ಹೋರಾಟ ಮಾಡಬೇಕಲ್ಲವೇ ಎಂದಿದ್ದಾರೆ.
ಇದನ್ನೂ ಓದಿ:ವೈಯಕ್ತಿಕ ಕಾರಣಗಳಿಂದ ತವರಿಗೆ ವಾಪಸ್ಸಾದ ವೇಗಿ ಬುಮ್ರಾ; ನೇಪಾಳ ಪಂದ್ಯದಿಂದ ಔಟ್​
ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ದವಾಗಿದೆ. ತಮಿಳುನಾಡಿನವರು ಪ್ರತಿನಿತ್ಯ 24 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಕೇಳಿದ್ದರು. ಪ್ರತಿನಿತ್ಯ 3 ಸಾವಿರ ಕ್ಯೂಸೆಕ್​ ನೀರು ಬಿಡಲು ಮಾತ್ರ ಸಾಧ್ಯ ಎಂದು ನಮ್ಮ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಇದರ ಪರಿಣಾಮವಾಗಿ ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಆದೇಶಿಸಿದೆ.
ನಾವು ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚಿಸಿದ್ದೇವೆ. ನಮ್ಮ ಅಣೆಕಟ್ಟುಗಳ ಪರಿಸ್ಥಿತಿ ಹೇಗಿದೆ ಎಂಬುದರ ವಾಸ್ತವ ಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಲಿದ್ದೇವೆ. ನ್ಯಾಯಾಲಯದಲ್ಲೂ ನಾವು ನಮ್ಮ ರೈತರ ಹಿತ ಕಾಯಲು ಬದ್ದರಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ನದಿ ನೀರು ಹಂಚಿಕೆ ಕುರಿತು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 7 =
Remember me
