ಬೆಂಗಳೂರು:ಕೇರಳದಲ್ಲಿ ನನ್ನ ಮೇಲೆ ಪ್ರಯೋಗ ನಡೀತಿದೆ. ಯಾರು ಮಾಡಿಸುತ್ತಿದ್ದಾರೆ ಎಂಬ ವಿಚಾರವೂ ನನಗೆ ಗೊತ್ತು ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್​​ ಹೊಸ ಬಾಂಬ್​​ ಒಂದನ್ನು ಸಿಡಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ನನ್ನ ಹಾಗೂ ಕಾಂಗ್ರೆಸ್​ ಸರ್ಕಾರದ ವಿರುದ್ಧ ಕೇರಳದ ರಾಜರಾಜೇಶ್ವರಿ ದೇವಾಲಯದಲ್ಲಿ ಪೂಜೆ ಮಾಡಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಭಾರತ-ಪಾಕ್​​ ಪಂದ್ಯಕ್ಕೆ ಉಗ್ರರ ಬೆದರಿಕೆ; ಭದ್ರತೆ ಹೆಚ್ಚಿಸಿದ ಪೊಲೀಸರು
ನನ್ನ ವಿರುದ್ಧ ವಿರೋಧಿಗಳು ದೊಡ್ಡ ಪ್ರಯೋಗ ಮಾಡಿಸುತ್ತಿದ್ದಾರೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನನ್ನ ಹಾಗೂ ಕಾಂಗ್ರೆಸ್​ ಸರ್ಕಾರದ ವಿರುದ್ಧ ಯಾಗ ಮಾಡಿಸಿದ್ದಾರೆ. ಅಘೋರಿಗಳ ಮೂಲಕ ಶತ್ರು ಬೈರವಿ ಯಾಗ, ಪಂಚ ಬಲಿ ಕೊಡುತ್ತಿದ್ದಾರೆ. ಇದನ್ನೆಲ್ಲಾ ಯಾರು ಮಾಡಿಸುತ್ತಿದ್ದಾರೆ ಎಂಬುದು ನಮಗೆ ಗೊತ್ತು. ನಾವು ನಂಬಿದ ದೇವರು ನಮ್ಮ ಮಕೈ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.
ಇತ್ತ ಡಿ.ಕೆ. ಶಿವಕುಮಾರ್​ ಅವರ ಹೇಳಿಕೆಯೂ ರಾಜಕೀಯ ವಲಯದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದ್ದು ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
