ಬೆಂಗಳೂರು:ಮುಖ್ಯಮಂತ್ರಿ ಪಟ್ಟಕ್ಕಾಗಿ ಕಳೆದ ಐದು ದಿನಗಳಿಂದ ದೆಹಲಿಯಲ್ಲಿ ನಡೆದ ಹಗ್ಗಜಗ್ಗಾಟಕ್ಕೆ ತೆರೆಬಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರು ಇಂದು ರಾಜಧಾನಿಗೆ ಬಂದಿಳಿದಿದ್ದಾರೆ. ಕಾಂಗ್ರೆಸ್​ ಹೈಕಮಾಂಡ್​ ತೀರ್ಮಾನದಂತೆ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿಕೆಶಿ ಅವರು ಆಯ್ಕೆಯಾಗಿದ್ದಾರೆ.
ಸಂಧಾನ ಯಶಸ್ವಿಯಾದ ಬೆನ್ನಲ್ಲೇ ಸಿದ್ದರಾಮಯ್ಯ ಮತ್ತು ಡಿಕೆಶಿ ಸಂಜೆ 6.30ರ ಸುಮಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಉಭಯ ನಾಯಕರು ಬಂದಿಳಿದರು. ಈ ವೇಳೆ ಎಂಬಿ ಪಾಟೀಲ್ ಸೇರಿದಂತೆ ಕೆಲ ಶಾಸಕರು ಆಗಮಿಸಿ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕರ್ನಾಟಕದ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕೂಡ ಸಿದ್ದು ಮತ್ತು ಡಿಕೆಶಿ ಜತೆ ಆಗಮಿಸಿದ್ದಾರೆ.
ಇದನ್ನೂ ಓದಿ:ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಿರುವ VVIPಗಳು ಯಾರು? ಆಹ್ವಾನಿತರ ಪಟ್ಟಿ ಇಂತಿದೆ…
ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ, ಪರಿಷತ್ ಸದಸ್ಯರು ಮತ್ತು ಸಂಸದರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಸಭೆ ಬಳಿಕ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರಾಜಭವನಕ್ಕೆ ತೆರಳಲಿದ್ದಾರೆ. ನಂತರ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಬಳಿಕ ರಾಜ್ಯಪಾಲರಿಂದ ಸರ್ಕಾರದ ರಚನೆಗೆ ಹಸಿರು ನಿಶಾನೆ ಸಿಗಲಿದೆ.
ಮೇ 20ರ ಶನಿವಾರದಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್​ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಗರದ ಕಂಠೀರವ ಸ್ಟೇಡಿಯಂಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
ಕಳೆದ ಐದು ದಿನಗಳಿಂದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರು ಸಿಎಂ ಸ್ಥಾನಕ್ಕಾಗಿ ದೆಹಲಿಯಲ್ಲಿ ಶತಪ್ರಯತ್ನ ನಡೆಸಿದರು. ಅಂತಿಮವಾಗಿ ಇದರಲ್ಲಿ ಸಿದ್ದರಾಮಯ್ಯಗೆ ಗೆಲುವಾಗಿದೆ. ಹಾಗಂತ ಐದು ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುವುದಿಲ್ಲ. ಬದಲಿಗೆ ಅಧಿಕಾರ ಹಂಚಿಕೆ ಸೂತ್ರದ ಅಡಿಯಲ್ಲಿ ಸಿದ್ದು ಮತ್ತು ಡಿಕೆಶಿ ನಡುವೆ ಸಿಎಂ ಸ್ಥಾನ ಹಂಚಿಕೆಯಾಗಲಿದೆ. ಈ ಒಂದು ಭರವಸೆ ಮೇಲೆ ಡಿಕೆಶಿ ಸಿಎಂ ಸ್ಥಾನದ ರೇಸ್​ನಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ. ಸ್ವತಃ ಸೋನಿಯಾ ಗಾಂಧಿಯವರೇ ಈ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್​ನ ಉನ್ನತ ಮೂಲಗಳು ತಿಳಿಸಿವೆ.
ಡಿಕೆಶಿ ಮನವೊಲಿಕೆ ಹಿಂದಿದೆ ಸೋನಿಯಾ ಗಾಂಧಿ ಪಾತ್ರ: ಆ ಒಂದು ಕರೆಗೆ ಕರಗಿದ ಕನಕಪುರದ ಬಂಡೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − thirteen =
Remember me
