ಬೆಂಗಳೂರು: ಬಿಜೆಪಿಯವರು ಪ್ರಾಮಾಣಿಕವಾಗಿದ್ದರೆ ನ್ಯಾಯಾಂಗ ತನಿಖೆ ಬಗ್ಗೆ ಭಯ ಏಕೆ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.ಕೋವಿಡ್ ಸಂದರ್ಭದ ಖರೀದಿಯನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿರುವುದರ ಹಿಂದೆ ದ್ವೇಷ ರಾಜಕೀಯವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದರಲ್ಲಿ ಯಾವುದೇ ದ್ವೇಷ ರಾಜಕಾರಣವಿಲ್ಲ. ಬೊಮ್ಮಾಯಿ ಅವರಿಂದ ನಮಗೆ ಪ್ರಮಾಣ ಪತ್ರ ಬೇಡ ಎಂದರು.ಆಕ್ಸಿಜನ್ ದುರಂತದಲ್ಲಿ 36 ಜನ ಸತ್ತಿದ್ದರು. ಆದರೆ ಆಗಿನ ಸಚಿವರು ಕೇವಲ 3 ಜನ ಮಾತ್ರ ಸತ್ತಿದ್ದಾರೆ ಎಂದು ಹೇಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಹೊಣೆಗಾರಿಕೆ ಮಾಡಿಲ್ಲ. ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ತನಿಖೆ ಆಗಬಾರದೇ? ಎಂದು ಪ್ರಶ್ನಿಸಿದರು.ಕೋವಿಡ್ ಉಪಕರಣಗಳ ಖರೀದಿಯಲ್ಲಿ ಕೇಂದ್ರ ಸರ್ಕಾರ ಮಾಡಿರುವ ವೆಚ್ಚದ ದರಕ್ಕೂ ರಾಜ್ಯ ಸರ್ಕಾರದ ವೆಚ್ಚದ ದರಕ್ಕೂ ಭಾರಿ ವ್ಯತ್ಯಾಸವಿದೆ. ಇನ್ನು ಬೆಡ್ ಬ್ಲಾಕಿಂಗ್ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪ ಮಾಡಿದ್ದರು. ಇದೆಲ್ಲದರ ಬಗ್ಗೆ ತನಿಖೆ ಮಾಡಬೇಕಲ್ಲವೇ? ಇನ್ನು ಸರ್ಕಾರ ರೂಪಿಸಿದ 10 ಸಾವಿರ ಬೆಡ್‌ಗಳ ಕೇಂದ್ರದಲ್ಲಿ ಯಾರೂ ಚಿಕಿತ್ಸೆ ಪಡೆಯಲಿಲ್ಲ. ಇದಕ್ಕೆ ಸಂಬಂಧಿಸಿದ ಗುತ್ತಿಗೆದಾರರು ಕಣ್ಣೀರು ಹಾಕುತ್ತಿದ್ದಾರೆ. ಈ ಎಲ್ಲದರ ಬಗ್ಗೆ ತನಿಖೆ ಮಾಡಿ ರಾಜ್ಯದ ಜನರಿಗೆ ನ್ಯಾಯ ಒದಗಿಸಿಕೊಡಬೇಕು ಎಂಬುದು ನಮ್ಮ ಬದ್ಧತೆ ಎಂದು ತಿಳಿಸಿದರು.ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಇತ್ತೀಚೆಗೆ ಮುಖ್ಯಮಂತ್ರಿ ಹಾಗೂ ನನ್ನನ್ನು ಭೇಟಿಯಾಗಿ ನ್ಯಾಯ ದೊರಕಿಸಿಕೊಡಬೇಕಾಗಿ ಮನವಿ ಮಾಡಿದರು. ಅವರ ಮನವಿಗೆ ಸ್ಪಂದಿಸಿದ್ದೇವೆ. ಬಿಜೆಪಿಯವರು ಈ ಪ್ರಕರಣದಲ್ಲಿ ಏನು ಮಾಡಿದರು? ತನಿಖೆ ನಡೆಯುವುದ್ದಕ್ಕೆ ಮುಂಚಿತವಾಗಿಯೇ ಅಂದಿನ ಮುಖ್ಯಮಂತ್ರಿಗಳಾದಿಯಾಗಿ, ಸಚಿವರು, ಯಡಿಯೂರಪ್ಪ ಅವರೆಲ್ಲಾ ಈಶ್ವರಪ್ಪ ದೋಷಮುಕ್ತರಾಗಿ ಬರುತ್ತಾರೆ ಎಂದು ತನಿಖಾಧಿಕಾರಿಗಳಿಗೆ ಸುಳಿವು ನೀಡಿದರು. ಆದರೆ ನಾವು ಈ ರೀತಿಯ ಕೆಲಸ ಮಾಡಲು ಹೋಗುವುದಿಲ್ಲ, ನಾವು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಕಾನೂನಿನ ಚೌಕಟ್ಟಿನಲ್ಲೇ ತನಿಖಾ ಆಯೋಗ ರಚಿಸಿದ್ದೇವೆ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 1 =
Remember me
