ಬೆಂಗಳೂರು:ರಾಜ್ಯದಲ್ಲಿ ಲೋಕಸಭೆಯ ಚುನಾವಣೆಯ ಕದನ ಕಣ ದಿನದಿಂದ ದಿನಕ್ಕೆ ರಂಘೇರುತ್ತಿದ್ದು, ಮೊದಲ ಹಂತದ ಮತದಾನಕ್ಕೆ 10 ದಿನಗಳು ಬಾಕಿ ಉಳಿದಿವೆ. ಈ ನಡುವೆ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ. ಸುರೇಶ್​ ಪರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತುಸು ವಿಭಿನ್ನವಾಗಿ ಮತಯಾಚಿಸುತ್ತಿದ್ದಾರೆ.
ಇದೀಗ ಡಿ.ಕೆ. ಶಿವಕುಮಾರ್​ ಮತಯಾಚನೆ ವೇಳೆ ಅಪಾರ್ಟ್​ಮೆಂಟ್​ ನಿವಾಸಿಗಳಿಗೆ ಆಮಿಷ ಒಡ್ಡಿದ್ದಾರೆ ಎಂಬ ಆರೋಪ ಕೇಳಿ ಬಂದಿದಗದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿ ಕಿಡಿಕಾರಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊತ್ವಾಲ್ ಬ್ರದರ್ಸ್‌ಗಳ ಗೂಂಡಾಗಿರಿ ದಿನೇ ದಿನೇ ಹೆಚ್ಚಾಗುತ್ತಿದೆ. ನಿನ್ನೆ ರೈತನ ಹೊಲ ಸುಟ್ಟು, ರೈತನಿಗೆ ಗನ್ ಪಾಯಿಂಟ್ ಇಟ್ಟು ವಾತಾವರಣವನ್ನು ಭಯಭೀತಗೊಳಿಸಿದ್ದರು. ಇಂದು ಅಪಾರ್ಟ್ಮೆಂಟ್ ನಿವಾಸಿಗಳ ಸಭೆ ನಡೆಸಿ ನೀವು ಡಿ.ಕೆ. ಸುರೇಶ್​ಗೆ ವೋಟು ಹಾಕಿಲ್ಲವೆಂದರೆ ನಿಮಗೆ ನೀರು ಕೊಡುವುದಿಲ್ಲ, ಹಕ್ಕು ಪತ್ರ ನೀಡುವುದಿಲ್ಲ ಎಂದು ನೇರವಾಗಿಯೇ ಡಿಸಿಎಂ ಡಿ.ಕೆ. ಶಿವಕುಮಾರ್​ ಅವರೇ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ನಿಮ್ಮ ಈ ಗೊಡ್ಡು ಬೆದರಿಕೆಗಳಿಗೆ ಜನತೆ ಏಪ್ರಿಲ್ 26 ರಂದು ಅಂತಿಮ ಮೊಳೆ ಹೊಡೆಯುವುದು ಖಚಿತ -ನಿಶ್ಚಿತ-ಖಂಡಿತ ಎಂದು ಟ್ವೀಟ್​ ಮಾಡಿ ಕಿಡಿಕಾರಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊತ್ವಾಲ್ ಬ್ರದರ್ಸ್‌ಗಳ ಗೂಂಡಾಗಿರಿ ದಿನೇ ದಿನೇ ಹೆಚ್ಚಾಗುತ್ತಿದೆ.ನಿನ್ನೆ ರೈತನ ಹೊಲ ಸುಟ್ಟು, ರೈತನಿಗೆ ಗನ್ ಪಾಯಿಂಟ್ ಇಟ್ಟು ವಾತಾವರಣವನ್ನು ಭಯಭೀತಗೊಳಿಸಿದ್ದರು.ಇಂದು ಅಪಾರ್ಟ್ಮೆಂಟ್ ನಿವಾಸಿಗಳ ಸಭೆ ನಡೆಸಿ ನೀವು@DKSureshINCಗೆ ವೋಟು ಹಾಕಿಲ್ಲವೆಂದರೆ ನಿಮಗೆ ನೀರು…pic.twitter.com/jlWYm1Cq5G
ಇದನ್ನೂ ಓದಿ:ಅಮೇಥಿಯಿಂದ ಚುನಾವಣೆಗೆ ಸ್ಪರ್ಧೆ; ಇದು ಬಿಜೆಪಿಯವರ ಪ್ರಶ್ನೆ ಎಂದು ಕಿಡಿಕಾರಿದ ರಾಹುಲ್
ನಿಮಗೆ ನಾನ್ನೊಂದು ಪ್ರಾಮಾಣಿಕ ಪ್ರಶ್ನೆ ಕೇಳುತ್ತೇನೆ, ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಒಂದು, ನಿಮ್ಮ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೇಯದ್ದು ಕಾವೇರಿ ನೀರು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ?. ನಿಮ್ಮ ಬೂತ್​ ಆರ್​ಆರ್​ನಗರದಲ್ಲಿದೆ. 2-3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ ಎಂದು ಪ್ರಶ್ನಿಸುತ್ತಾರೆ.
ನಾನು ಉಪಮುಖ್ಯಮಂತ್ರಿಯಾಗಿದ್ದೇನೆ, ಬಿಡಿಎ ಸಚಿವನಿದ್ದೇನೆ, ಬೆಂಗಳೂರು ನಗರಾಭಿವೃದ್ಧಿ ಸಚಿವನಿದ್ದೇನೆ, ಬೆಂಗಳೂರು ಜಲಮಂಡಳಿ ಸಚಿವನಿದ್ದೇನೆ. ಈ ಎಲ್ಲವೂ ನಿಮ್ಮ ಪಾಕೆಟ್​ನಲ್ಲಿವೆ. ಏನೆ ಸಮಸ್ಯೆಯಿದ್ದರು ನೀವು ಮುಖ್ಯಮಂತ್ರಿಗಳ ಮನೆಗೆ ಹೋಗಬೇಕಿಲ್ಲ. ನನ್ನ ಮನೆಗೆ ಬನ್ನಿ. ನಾನು ನಿಮಗೆ ಸಹಾಯ ಮಾಡುತ್ತೇನೆ. ನಾನು ನಿಮ್ಮ ಕೈಯಲ್ಲಿದ್ದೇನೆ. ಈಗ ಹೇಳಿ ನನಗೆ ಹೇಗೆ ಸಹಾಯ ಮಾಡುತ್ತೀರಿ, ನನಗೆ ಭರವಸೆ ನೀಡಿ, ನನಗೆ ಮತ ಹಾಕಿ. ನಾನು ನಿಮಗೆ ಭರವಸೆ ನೀಡುತ್ತೇನೆ 2-3 ತಿಂಗಳಲ್ಲಿ ನಿಮ್ಮ ಈ ಎರಡು ಬೇಡಿಕೆಗಳನ್ನು ಈಡೇರಿಸುತ್ತೇನೆ. ಇದು ನನ್ನ ತಮ್ಮನ ಲೋಕಸಭಾ ಕ್ಷೇತ್ರ, ನನ್ನ ಕ್ಷೇತ್ರ ಇದ್ದ ಹಾಗೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಅಪಾರ್ಟ್​ಮೆಂಟ್​ ನಿವಾಸಿಗಳಿಗೆ ಹೇಳುತ್ತಿರುವ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಪೋಸ್ಟ್​ ಮಾಡಿ ಕಿಡಿಕಾರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − three =
Remember me
