ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್​ಗೆ ಈಗ ಸಿಎಂ ಆಯ್ಕೆಯೇ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಇನ್ನೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಈ ನಡುವೆ ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್ ಪಟ್ಟು ಬಿಗಿಗೊಳಿಸಿದ್ದು, ಈಗ ಅವರ ಸಹೋದರ ಡಿ.ಕೆ.ಸುರೇಶ್ ಕೂಡ ನೇರ ಎಂಟ್ರಿ ಆಗಿದ್ದಾರೆ.
ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ ಇಬ್ಬರೂ ತಮ್ಮ ಪಟ್ಟು ಬಿಗಿಗೊಳಿಸಿದ್ದು, ಯಾರನ್ನು ಸಿಎಂ ಆಗಿ ಆಯ್ಕೆ ಮಾಡಬೇಕು ಎಂಬ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ ನಡುವೆ ಸಿಎಂ ಆಯ್ಕೆ ನಿರ್ಧಾರ ಹೈಕಮಾಂಡ್​ ವಿವೇಚನೆಗೆ ಬಿಟ್ಟಿದ್ದು ಎಂಬ ನಿರ್ಣಯವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಯಲ್ಲಿದ್ದಾರೆ. ಮತ್ತೊಂದೆಡೆ ದೆಹಲಿಗೆ ಬರುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಹೇಳಿದ್ದರೂ ಅವರು ಹೋಗಿಲ್ಲ.
ಇದನ್ನೂ ಓದಿ:ವಿದ್ಯಾರ್ಥಿಗಳೇ ಗಮನಿಸಿ: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನೋಂದಣಿಗೆ ಕಡೇ ದಿನಾಂಕ ವಿಸ್ತರಣೆ
ಅನಾರೋಗ್ಯದ ನೆಪ ಹೇಳಿ ಡಿ.ಕೆ.ಶಿವಕುಮಾರ್​ ಬೆಂಗಳೂರಿನಲ್ಲೇ ಉಳಿದಿದ್ದು, ಈ ಮೂಲಕ ಹೈಕಮಾಂಡ್​ಗೆ ತಮ್ಮ ಅಸಮಾಧಾನ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಪರಿಸ್ಥಿತಿಯನ್ನು ಎರಡೂ ರೀತಿಯಲ್ಲಿ ನಿಭಾಯಿಸುವ ಹಿನ್ನೆಲೆಯಲ್ಲಿ ಸಹೋದರ ಡಿ.ಕೆ.ಸುರೇಶ್​ ಅವರನ್ನು ದೆಹಲಿಗೆ ಕಳುಹಿಸಿದ್ದಾರೆ.
ಇದನ್ನೂ ಓದಿ:ಲಿಂಗಾಯತರನ್ನು ಸಿಎಂ ಮಾಡಲಿ ನೋಡೋಣ: ಕಾಂಗ್ರೆಸ್​ಗೆ ಮಾಜಿ ಸಚಿವ ನಿರಾಣಿ ಸವಾಲು
ಕೆಲವು ಶಾಸಕರ ದಂಡಿನೊಂದಿಗೆ ದೆಹಲಿಗೆ ತೆರಳಿರುವ ಡಿ.ಕೆ. ಸುರೇಶ್, ಸದ್ಯಕ್ಕೆ ದೆಹಲಿಗೆ ಬರುವುದು ಬೇಡ ಎಂದೂ ಸಹೋದರನಿಗೆ ಸಂದೇಶ ರವಾನಿಸಿದ್ದಾರೆ. ನಾನು ಅಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಬಾ ಎಂದು ಹೇಳಿದ ಮೇಲೆಯೇ ನೀನು ಹೊರಡು ಎಂಬ ಸಲಹೆಯನ್ನೂ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಆಯ್ಕೆ ಸದ್ಯಕ್ಕೆ ತೀರ್ಮಾನ ಆಗುವ ಲಕ್ಷಣಗಳು ಕಾಣಿಸುತ್ತಿಲ್ಲ.
ಇದನ್ನೂ ಓದಿ:ನಾವ್ಯಾರೂ ಪಕ್ಷಕ್ಕೆ ಅನಿವಾರ್ಯ ಅಲ್ಲ: ಮಾಜಿ ಸಚಿವ ವಿ.ಸೋಮಣ್ಣ
ಸದ್ಯ ಬೆಂಗಳೂರಿನ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ವಿಶ್ರಾಂತಿಯಲ್ಲಿದ್ದು, ವೈದ್ಯರು ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ರಕ್ತದೊತ್ತಡ, ಮಧುಮೇಹ ಇತ್ಯಾದಿ ಪರೀಕ್ಷೆ ಮಾಡಿ ಹೊಟ್ಟೆನೋವಿಗೆ ಮಾತ್ರೆ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಚುನಾವಣಾ ಫಲಿತಾಂಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ಕಾಂಗ್ರೆಸ್ ಅಭ್ಯರ್ಥಿ ನಿರ್ಧಾರ

ನಾನು ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ, ಅವರೇನು ನಿರ್ಧರಿಸುತ್ತಾರೋ ನೋಡೋಣ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 13 =
Remember me
