ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮಾಟ ಮಂತ್ರ ಹಾಗೂ ವಾಮಾಚಾರದ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಪೂರಕವೆಂಬಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಗುರುವಾರ (ಮೇ 30) ತಮ್ಮ ವಿರುದ್ಧ ಕೇರಳದ ರಾಜಾರಾಜೇಶ್ವರಿ ದೇಗುಲದಲ್ಲಿ ಅಘೋರಿಗಳ ಮೂಲಕ ಶತ್ರು ಸಂಹಾರ ಯಾಗ ಮಾಡಲಾಗುತ್ತಿದೆ ಎಂದು ಆರೋಪಿಸುವ ಮೂಲಕ ಹೊಸ ಬಾಂಬ್​ ಒಂದನ್ನು ಸಿಡಿಸುವ ಮೂಲಕ ಸುದ್ದಿಯಾಗಿದ್ದರು.
ಇದೀಗ ಈ ಕುರಿತು ಸ್ಪಷ್ಟನೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್​ ಯಾಗ ನಡೆದಿರುವ ಸ್ಥಳದ ಬಗ್ಗೆ ಮಾಹಿತಿ ನೀಡಲಷ್ಟೇ ನಾನು ದೇಗುಲದ ಹೆಸರನ್ನು ಉಲ್ಲೇಖಿಸಿದ್ದೆ ಎಂದು ಹೇಳುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿರುವ ಅವರು, ನಾನು ದೇವಿ ರಾಜರಾಜೇಶ್ವರಿಯ ಭಕ್ತನಾಗಿದ್ದು, ಈ ದೇವಸ್ಥಾನದಲ್ಲಿ ಶತ್ರು ಸಂಹಾರ ಪೂಜೆ ಮಾಡುವುದಿಲ್ಲ ಎನ್ನುವ ಅರಿವಿದೆ. ನನ್ನ ಹೇಳಿಕೆಯನ್ನು ಕೆಲವರು ತಪ್ಪಾಗಿ ಗ್ರಹಿಸಿದ್ದು, ದೇವಸ್ಥಾನದಿಂದ 15 ಕಿ.ಮೀ. ದೂರದಲ್ಲಿರುವ ಖಾಸಗಿ ಸ್ಥಳದಲ್ಲಿ ಯಾಗ ನಡೆದಿದೆ ಎಂದು ಸ್ಪಷ್ಟಪಡಿಸುತ್ತೇನೆ.
I am a big believer and devotee of Devi Rajarajeshwari, and I know that 'shathrusamharapooja' is NOT performed in Rajarajeshwari temple. My words are being misconstrued, and so I would like to clarify that I was talking about this pooja being performed some 15kms away from…pic.twitter.com/kTNJyUYSu7
ಇದನ್ನೂ ಓದಿ:ಡ್ಯಾನ್ಸ್​ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಪ್ರಾಣಬಿಟ್ಟ ನಿವೃತ್ತ ಯೋಧ; ಹೃದಯ ವಿದ್ರಾವಕ ವಿಡಿಯೋ ವೈರಲ್
ಯಾಗ ನಡೆದಿರುವ ಸ್ಥಳದ ಬಗ್ಗೆ ಮಾಹಿತಿ ನೀಡಲಷ್ಟೇ ನಾನು ದೇಗುಲದ ಹೆಸರನ್ನು ಉಲ್ಲೇಖಿಸಿದ್ದೆ. ಕೆಲವು ದಿನಗಳ ಹಿಂದೆ ತಾಯಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ‌ಭೇಟಿ‌ ನೀಡಿ ದೇವಿಯ ಆಶೀರ್ವಾದ ಪಡೆದಿದ್ದೆ. ವಿಷಯಗಳನ್ನು ಸಂದರ್ಭದಿಂದ ಹೊರಗಿಟ್ಟು ಅವುಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.
ಶತ್ರು ಸಂಹಾರ ಪೂಜೆಯಲ್ಲಿ 21 ಕುರಿ, 3 ಎಮ್ಮೆ, 3 ಹಂದಿ, ಕೋಳಿಗಳನ್ನ ಬಲಿ ಕೊಡಲಾಗ್ತಾ ಇದೆ. ಇದನ್ನ ಯಾರು ಮಾಡಿಸ್ತಾ ಇದಾರೆ ಎಂಬುದು ನನಗೆ ಗೊತ್ತಿದೆ. ನಮ್ಮನ್ನ ತುಳಿಯಲು ಪ್ರಯತ್ನ ಮಾಡ್ತಿದ್ದಾರೆ. ನಾವು ನಂಬಿದ ದೇವರು ನಮ್ಮನ್ನ ಕಾಪಾಡುತ್ತಾನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಗುರುವಾರ (ಮೇ 30) ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + seventeen =
Remember me
