ಬೆಂಗಳೂರು:ಆರ್​ಆರ್​ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಯ ಕಣ ದಿನೇ ದಿನೆ ರಂಗೇರುತ್ತಿದ್ದು, ಕಾಂಗ್ರೆಸ್​, ಜೆಡಿಎಸ್​ ಮತ್ತು ಆಡಳಿತರೂಢ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದೆ. ಈ ಹಿನ್ನೆಲೆಯಲ್ಲಿ ಮೂರು ಪಕ್ಷಗಳು ಭಾರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ.
ಕಾಂಗ್ರೆಸ್​ನಿಂದ ಬಿಜೆಪಿಗೆ ಹಾರಿ ಆರ್​ಆರ್​ ನಗರ ಕ್ಷೇತ್ರದಿಂದ ಕಾಂಗ್ರೆಸ್ ವಿರುದ್ಧವೇ ಕಣಕ್ಕಿಳಿದಿರುವ ಹಾಗೂ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾದ ಮುನಿರತ್ನರನ್ನು ಸೋಲಿಸಲೇಬೇಕೆಂಬ ಜಿದ್ದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಬಿದ್ದಿದ್ದಾರೆ. ಹೀಗಾಗಿ ಸಾಕಷ್ಟು ರಣತಂತ್ರಗಳನ್ನು ಎಣೆಯುತ್ತಿದ್ದಾರೆ.
ಇದನ್ನೂ ಓದಿ:ಮಂಗಳೂರು ಸಿಟಿ ಬಸ್‌ಗಳಲ್ಲಿ ಚಲೋ ಸೂಪರ್ ಸೇವರ್ ಯೋಜನೆ ಆರಂಭ
ಇತ್ತ ಚುನಾವಣೆ ಸಮೀಪಿಸುತ್ತಿದ್ದಂತೆ ಡಿಕೆಶಿ, ನಟ ನೆನಪಿರಲಿ ಪ್ರೇಮ್ ಮನೆಗೆ ಭೇಟಿ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆರ್​ಆರ್ ನಗರ ಹಾಗೂ ಶಿರಾ ಎಲೆಕ್ಷನ್ ಪ್ರಚಾರಕ್ಕೆ ಆಹ್ವಾನಿಸಲು ಭೇಟಿ ನೀಡಿದ್ರಾ? ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಇಷ್ಟೇ ಅಲ್ಲದೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರನ್ನು ಸಹ ಡಿಕೆಶಿ ಭೇಟಿ ಮಾಡಿದ್ದಾರೆ. ನಾಗರಬಾವಿ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಇದೇ ವೇಳೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಮಿಲನಕ್ಕಾಗಿ ಸಂಗಾತಿ ಹುಡುಕುತ್ತಿದ್ದ ಜಿಂಕೆ ಮುಂದೆ ನಿಂತು ಸೆಲ್ಫಿಗೆ ಯತ್ನ: ಯುವತಿ ಗತಿ ಏನಾಯ್ತು ನೋಡಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × five =
Remember me
