ಬೆಂಗಳೂರು:ಕೇಂದ್ರದಿಂದ ನಾವು ಪುಕ್ಸಟ್ಟೆಯಾಗಿ ಅಕ್ಕಿ ಕೊಡುವಂತೆ ಕೇಳಿಲ್ಲ. ಅವರೇನು ಪಕ್ಸಟ್ಟೆಯಾಗಿ ಕೊಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ.
ಕೇಂದ್ರದಿಂದ ಅಕ್ಕಿ ಸರಬರಾಜು ನಿಲುಗಡೆ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ಕೊಡುವಂತೆ ನಾವು ಪಕ್ಸಟ್ಟೆ ಕೇಳಿಲ್ಲ. ಜೂಲೈ 1 ರಿಂದ ಅನ್ನ ಭಾಗ್ಯ ಯೋಜನೆಯಡಿ 10 kg ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ ಎಮದು ವಾಗ್ಧಾಳಿ ಮಾಡಿದ್ದಾರೆ.
ಇದನ್ನೂ ಓದಿ: 3 ದಿನದಲ್ಲಿ 98 ಲಕ್ಷ ಮಹಿಳೆಯರಿಂದ ಉಚಿತ ಪ್ರಯಾಣ; ಸರ್ಕಾರಕ್ಕಾದ ಖರ್ಚು 21 ಕೋಟಿ ರೂ.
ಸಿಎಂ ಈಗಾಗಲೇ ಛತ್ತಿಸ್​ಘಡ, ತೆಲಾಂಗಣ ಸೇರಿದಂತೆ ವಿವಿಧ ರಾಜ್ಯದ ಜತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದನ್ನ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ನಮಗೆ ಕೊಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್ ಡ್ರಾ ಮಾಡಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ. ಈ ರೂಪುರೇಷೆಯ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಆಕ್ರೊಶ ಹೊರಹಾಕಿದ್ದಾರೆ.
ಕರ್ನಾಟಕದ ರೈತರಿಂದಲೇ ಅಕ್ಕಿ ಖರೀದಿ ವಿಚಾರವಾಗಿ ಮಾತನಾಡಿ, ಓಪನ್ ಮಾರ್ಕೆಟ್​​​ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಖರೀದಿ ಮಾಡಬೇಕು. ಯಾರ ಬಳಿಯೂ‌ ಬೊಟ್ಟು ತೋರಿಸುಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಅನ್ನಭಾಗ್ಯ: ಇಂದು ಸಂಜೆಯೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಸಿಎಂ ಟ್ವೀಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eight =
Remember me
