ಬೆಂಗಳೂರು:ತುಮಕೂರು ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೆಲಸ ಮಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ತಿರುಗೇಟು ನೀಡಿದ್ದಾರೆ.
ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರು ಮತ್ತು ಬಿಜೆಪಿಯವರು ಏನು ಬೇಕಾದರೂ ಮಾತನಾಡಲಿ ನಮಗೇನು ತೊಂದರೆಯಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಚಟುವಟಿಕೆ ನಮಗೆ ಬೇಕಾಗಿಲ್ಲ. ಸಿದ್ದರಾಮಯ್ಯ ನಮ್ಮ ಶಾಸಕಾಂಗ ಪಕ್ಷದ ನಾಯಕರು. ಅವರೇಕೆ ರಾಜೇಶ್ ಗೌಡರನ್ನು ಬಿಜೆಪಿ ಕಳುಹಿಸಿ ಕೊಡುತ್ತಾರೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಕ್ಯಾನ್ಸರ್​, ಮಧುಮೇಹ, ಅಸ್ತಮಾ ಜತೆಗೆ 172 ಕೆಜಿ ತೂಕ: ಹಲವು ಕಾಯಿಲೆಗಳಿದ್ರೂ ಮಹಿಳೆ ಕರೊನಾ ಜಯಿಸಿದ್ಹೇಗೆ?
ರಾಜೇಶ್ ಗೌಡ ನಮ್ಮ ಪಕ್ಷದ ಸದಸ್ಯರೇನಲ್ಲ. ಅವರ ತಂದೆ ನಮ್ಮ ಪಕ್ಷದಲ್ಲಿ ಸಂಸದರಾಗಿದ್ದರು. ಇವಾಗ ರಾಜೇಶ್ ಗೌಡ ಬಿಜೆಪಿಗೆ ಹೋಗಿದ್ದಾರೆ. ಶಿರಾ ಕ್ಷೇತ್ರದ ನಮ್ಮ ಅಭ್ಯರ್ಥಿ ಅತ್ಯಂತ ತಿಳುವಳಿಕಸ್ಥರು. ಅತ್ಯಂತ ಹಿರಿಯ ವ್ಯಕ್ತಿ. ನಾವೆಲ್ಲರೂ ಒಗ್ಗಟ್ಟಿಂದ ಅವರನ್ನು ಕಣಕ್ಕೆ ಇಳಿಸಿದ್ದೇವೆ ಎಂದು ಹೇಳಿದರು.
ಶಿರಾ ಜನರು ದಡ್ಡರೇನು ಅಲ್ಲ. ಬಹಳ ಪ್ರಜ್ಞಾವಂತರು ಮತ್ತು ಬುದ್ಧಿವಂತರಿದ್ದಾರೆ. ಅವರು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಡಿಕೆಶಿ ತಿರುಗೇಟು ನೀಡಿದರು.(ದಿಗ್ವಿಜಯ ನ್ಯೂಸ್​)
ಈ ಊರಲ್ಲಿ ಒಕ್ಕಲಿಗರು ಬಿಟ್ಟು ಬೇರೆ ಸಮುದಾಯ ವಾಸಕ್ಕೆ ಬಂದ್ರೆ ಆಪತ್ತು ಖಚಿತ: ಇದು ನಿಗೂಢ ಗ್ರಾಮವಂತೆ..!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 3 =
Remember me
