ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಟೇಕಾಫ್ ಆಗುವ ವೇಳೆ ರಣಹದ್ದು ಡಿಕ್ಕಿಯಾಗಿದೆ. ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ. ಕೂಡಲೇ ಪೈಲಟ್ ಹೆಲಿಕಾಪ್ಟರ್​ನ್ನು ಭೂಸ್ಪರ್ಶ ಮಾಡಿದ್ದು, ಭಾರೀ ಅನಾಹುತವೊಂದು ತಪ್ಪಿದೆ.
ಇದನ್ನೂ ಓದಿ:ರಾಮನಿಗೆ ಸಂಕಟ ಬಂದಾಗ ಹನುಮ ಇದ್ದಂತೆ ದೇಶಕ್ಕೆ ಸಂಕಷ್ಟ ಬಂದಾಗ ಮೋದಿ ಇದ್ದಾರೆ: ಯೋಗಿ ಆದಿತ್ಯನಾಥ್

ಡಿ.ಕೆ.ಶಿವಕುಮಾರ್ ಎಚ್​ಎಎಲ್​ ವಿಮಾನ ನಿಲ್ದಾಣದಿಂದ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ತೆರಳಲು ನಿರ್ಧರಿಸಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ರಣಹದ್ದು ಡಿಕ್ಕಿಯಾಗಿ ಗಾಜು ಪುಡಿಯಾದ ಪರಿಣಾಮ ಹೆಲಿಕಾಪ್ಟರ್ ಪ್ರಯಾಣವನ್ನು ಡಿಕೆಶಿ ಮೊಟಕುಗೊಳಿಸಿದ್ದಾರೆ. ಕೊನೆಗೆ ರಸ್ತೆ ಮಾರ್ಗವಾಗಿ ತೆರಳಿದ್ದಾರೆ.

ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದೆ ಎಲ್ಲರೂ ಸುರಕ್ಷಿತವಾಗಿದ್ದಾರೆ.pic.twitter.com/nwMDlazxU1
ಇದನ್ನೂ ಓದಿ:ನೀವು ಕೊಟ್ಟಿರುವ 40% ಹಣದಲ್ಲೇ ಬಿಜೆಪಿ ಶಾಸಕರನ್ನು ಖರೀದಿಸುತ್ತದೆ: ರಾಹುಲ್ ಗಾಂಧಿ
ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದೆ, ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದೆ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eight =
Remember me
