ಬೆಂಗಳೂರು:ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಸರ್ಕಾರದ ಈ ನಿರ್ಧಾರ ರಾಜಕೀಯ ಪ್ರೇರಿತ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ. ಸರ್ಕಾರ ಏನೇ ದಮನಕಾರಿ ಪ್ರವೃತ್ತಿ ತೋರಿಸಿದರೂ ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರೇ ಹೊರತು ಕಾನೂನು ಭಂಗ ಮಾಡುವವರಲ್ಲ. ಕಾನೂನಿನ ಅಡಿಯಲ್ಲೇ ನಾವು ಕಾರ್ಯಕ್ರಮ ಮಾಡಲಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ:ಪ್ರಿಯಾಂಕಾ ನಾಯಕತ್ವ, ದೇವೇಗೌಡರ ರಾಜಕೀಯ ಭವಿಷ್ಯ ಕುರಿತು ವಿಶ್ವನಾಥ್ ಚಿಂತೆ!
ಪದಗ್ರಹಣ ಸಮಾರಂಭಕ್ಕೆ ಎರಡನೇ ಬಾರಿ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಸರ್ಕಾರ ರಾಜಕೀಯ ದುರುದ್ದೇಶದಿಂದ ಈ ತೀರ್ಮಾನ ಕೈಗೊಂಡಿದೆ. ಸರ್ಕಾರ ಕೂಡಲೇ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ‌್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಅನ್ವಯ ಆಗುವುದೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಇದನ್ನೂ ಓದಿ:ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರಕ್ಕೆ ಅಡ್ಡಿ ಮೇಲೆ ಅಡ್ಡಿ!
ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರಿಗಿಂತ ಪತ್ನಿಯೇ ಸಿರಿವಂತೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 17 =
Remember me
