ಬೆಂಗಳೂರು:ಕೆಪಿಸಿಸಿಯ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾವು ಪ್ರತಿಜ್ಞಾವಿಧಿ ಸ್ವೀಕರಿಸುವ ಸಮಾರಂಭದ ಪೂರ್ವಭಾವಿ ಸಿದ್ಧತೆಗಳನ್ನು ಶನಿವಾರ ವೀಕ್ಷಿಸಿದರು.

ಸಂಸದ, ಸೋದರ ಡಿ.ಕೆ. ಸುರೇಶ್ ಕೂಡ ಜತೆಗಿದ್ದರು. ಇದೇ ಸಂದರ್ಭದಲ್ಲಿ ಪಕ್ಷದ ನಾಯಕರು ಹಾಗೂ ಉಸ್ತುವಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕಾರ್ಯಕ್ರಮದ ಕುರಿತು ಅಗತ್ಯ ಮಾರ್ಗದರ್ಶನ ನೀಡಿದರು.
ಜೂನ್ 14ರಂದು ಪ್ರತಿಜ್ಞಾವಿಧಿ ಸ್ವೀಕರಿಸಲು ಡಿ.ಕೆ. ಶಿವಕುಮಾರ್ ಈ ಮೊದಲು ನಿರ್ಧರಿಸಿದ್ದರು. ಆದರೆ ರಾಜ್ಯ ಸರ್ಕಾರ ಅದಕ್ಕೆ ಅನುಮತಿ ನೀಡಿರಲಿಲ್ಲ. ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕವಾಗಿ ಅನುಮತಿ ನೀಡಿದ್ದರಾದರೂ, ಹಲವು ಸಿದ್ಧತೆ ಮಾಡಿಕೊಳ್ಳಬೇಕಾಗಿರುವುದರಿಂದ ಅದೇ ದಿನ ಸಮಾರಂಭ ನಡೆಸಲು ಸಾಧ್ಯವಾಗದು ಎಂದು ಶಿವಕುಮಾರ್ ಸ್ಪಷ್ಟಪಡಿಸಿದ್ದರು.ಇದನ್ನೂ ಓದಿ:ಸೇವೆಯಿಂದ ಸಿಬ್ಬಂದಿ ತೆಗೆದರೆ ಕಾರ್ಖಾನೆ ಮುಂದೆ ಧರಣಿ, ಜಿಂದಾಲ್‌ಗೆ ಎಚ್ಚರಿಕೆ ನೀಡಿದ ಶಾಸಕ ಸೋಮಶೇಖರರೆಡ್ಡಿ

ಹೀಗಾಗಿ ಸಮಾರಂಭದ ದಿನಾಂಕವನ್ನು ಇನ್ನೂ ಘೋಷಣೆ ಮಾಡಬೇಕಿದೆ. ಈ ಮೊದಲಿನ ಸಿದ್ಧತೆ ಪ್ರಕಾರ ರಾಜ್ಯದ ಸುಮಾರು 10 ಸಾವಿರ ಸ್ಥಳಗಳಲ್ಲಿ ಈ ಸಮಾರಂಭದ ನೇರ ಪ್ರಸಾರವನ್ನು ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಪರದೆಗಳಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

ಅಲ್ಪಸಂಖ್ಯಾತ ಹಿಂದುಗಳ ಕೈಗೆ ಶಸ್ತ್ರಾಸ್ತ್ರ ನೀಡಿ; ನಿವೃತ್ತ ಪೊಲೀಸ್​ ಮಹಾ ನಿರ್ದೇಶಕ ಒತ್ತಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
