ಬೆಂಗಳೂರು: ಜಾತಿ ಗಣತಿ ಸಂಬಂಧ ವಿವಿಧ ಸಮುದಾಯಗಳು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಅಭಿಪ್ರಾಯವನ್ನು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆಂಬ ಊಹಾಪೋಹ ಹರಿದಾಡಿದೆ.ಈ ಬಗ್ಗೆ ಸಚಿವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯೆಯನ್ನೂ ನೀಡಿದ್ದು, ಕಾಂತರಾಜು ಅವರ ವರದಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮಗೆ ಬರೆದಿದ್ದಾರೆ ಎನ್ನಲಾದ ಪತ್ರ ಇನ್ನು ತಲುಪಿಲ್ಲ. ಪತ್ರ ತಲುಪಿದರೆ ಖುದ್ದಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ. ಪತ್ರ ನೋಡದೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದರು.ಕಾಂತರಾಜು ಅವರ ವರದಿಯಲ್ಲಿ ಏನಿದೆ ಎಂಬುದೆ ಇನ್ನು ತಿಳಿದಿಲ್ಲ. ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಪ್ರತಿಯೊಂದು ಸಮುದಾಯದ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸಮೀಕ್ಷೆ ನಡೆಸಲಾಗಿದೆ. ಕಾಂತರಾಜು ಅವರ ವರದಿ ಸ್ವೀಕಾರ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಕಾಂತರಾಜು ವರದಿ ಬಗ್ಗೆ ಕೆಲವೊಂದು ಸಮುದಾಯದಿಂದ ವಿರೋಧ ವ್ಯಕ್ತವಾಗಿದೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವರದಿ ಸ್ವೀಕಾರ ಆಗುವುದಕ್ಕೂ ಮುನ್ನವೇ ವಿರೋಧ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + 17 =
Remember me
