ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಏನಾದರೂ ಪೋಸ್ಟ್ ಮಾಡಬೇಕಿದ್ದರೆ ಎಚ್ಚರದಿಂದ ಇರಬೇಕು ಎನ್ನುತ್ತಾರೆ. ಅದರಲ್ಲಾಗುವ ಸಣ್ಣ ತಪ್ಪು ದೊಡ್ಡ ಪರಿಣಾಮ ಬೀರಬಹುದು. ಇದೀಗ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತಪ್ಪೊಂದನ್ನು ಮಾಡಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಡಿಕೆಶಿ ಅವರು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಒಂದಿಷ್ಟು ರಾಜಕೀಯ ಪ್ರಮುಖರೊಂದಿಗಿರುವ ಫೋಟೋ ಹಂಚಿಕೊಂಡಿರುವ ಅವರು, “ನನ್ನ ನಿವಾಸದಲ್ಲಿ, ಲೋಕಸಭಾ ಸದಸ್ಯರಾದ ಶ್ರೀ ಕರಡಿ ಸಂಗಣ್ಣ ಅಮರಪ್ಪ, ಶಾಸಕರಾದ ಶ್ರೀ ಬಸನಗೌಡ ದದ್ದಲ್, ಶಾಸಕರಾದ ಶ್ರೀ ಪಿ.ಟಿ.ಪರಮೇಶ್ವರ್ ನಾಯಕ್, ವಿಧಾನ ಪರಿಷತ್ ಸದಸ್ಯ ಶ್ರೀ ಎಸ್​ಎಲ್​ ಘೋಟ್ನೇಕರ್ರ, ಮಾಜಿ ಮಂತ್ರಿಗಳಾದ ಶ್ರೀ ಮಲ್ಲಿಕಾರ್ಜುನ್ ನಾಗಪ್ಪ ಅವರನ್ನು ಭೇಟಿ ಮಾಡಿ, ಬೇರುಮಟ್ಟದಿಂದ ಪಕ್ಷ ಬಲಗೊಳಿಸುವ ಬಗ್ಗೆ ಚರ್ಚೆ ನಡೆಸಿದೆವು” ಎಂದು ಬರೆದುಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಇದನ್ನು ಪೋಸ್ಟ್ ಮಾಡಲಾಗಿದೆ.
ಆದರೆ ಅವರು ಪೋಸ್ಟ್ ಮಾಡಿರುವ ಫೋಟೋದಲ್ಲಿ ಎಲ್ಲಿಯೂ ಕರಡಿ ಸಂಗಣ್ಣ ಅಮರಪ್ಪ ಕಾಣಿಸಿಲ್ಲ. ಬಿಜೆಪಿ ಪಕ್ಷದಿಂದ ಚುನಾಯಿತರಾಗಿರುವ ಅವರನ್ನು ಕಾಂಗ್ರೆಸ್​ನ ಬಲ ಪಡಿಸುವ ಚರ್ಚೆಯಲ್ಲಿ ಭಾಗವಹಿಸಿದ್ದರು ಎಂದು ಡಿಕೆಶಿ ಹೇಳಿರುವುದಕ್ಕೆ ಸಂಗಣ್ಣ ಅವರು ಕಿಡಿ ಕಾರಿದ್ದಾರೆ. ನಾನು ದೆಹಲಿಯಲ್ಲೇ ಇದ್ದೇನೆ. ಡಿ.ಕೆ.ಶಿವಕುಮಾರ್ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪೋ್ಟ್ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಅವರ ಈ ಪೋಸ್ಟ್ ಇದೀಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
‘ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಗಳಾಗಿರೋದು’ ಮಾಜಿ ಸಚಿವ ಎಚ್​.ಡಿ.ರೇವಣ್ಣ

ಉತ್ತರ ಕನ್ನಡ ಪ್ರವಾಹ: ನೆರೆ ಸಂತ್ರಸ್ತರ ನೆರವಿಗೆ ನಿಲ್ಲುವುದಾಗಿ ಭರವಸೆ ಕೊಟ್ಟ ಸಿಎಂ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 7 =
Remember me
