ಬೆಂಗಳೂರು: ನಿಗಮ ಮಂಡಳಿಗಳಲ್ಲಿ ನಮಗೆ ಆದ್ಯತೆ ನೀಡಬೇಕೆಂದು ಪಕ್ಷದ ಹಿರಿಯ ಕಾರ್ಯಕರ್ತರು, ಹಳೆಯ ಪದಾಧಿಕಾರಿಗಳು ನಿರಂತರವಾಗಿ ಪ್ರತ್ಯೇಕ ಗುಂಪು ಸಭೆ ನಡೆಸಿ ಒತ್ತಡ ಹೇರುತ್ತಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಸಭೆ ನಡೆಸಿ ಸಮಾಲೋಚನೆ ನಡೆಸಿದರು.
ಪರಿಷತ್ ನೇಮಕದಲ್ಲಿ ಸುಧಾಮ್ ದಾಸ್ ಹಾಗೂ ಉಮಾಶ್ರೀ ನೇಮಕದ ವಿರುದ್ಧ ಕಾಂಗ್ರೆಸ್ ಹಳೆಯ ಪದಾಧಿಕಾರಿಗಳು ತೀವ್ರ ಅಸಮಾಧಾನಗೊಂಡು ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದರು. ಪಕ್ಷಕ್ಕಾಗಿ ನಿರಂತರವಾಗಿ ದುಡಿಯುವವರಿಗೆ ಅವಕಾಶವೇ ಇಲ್ಲ ಎಂದು ಪ್ರಶ್ನಿಸಿದ್ದರು.ಈ ಹಿನ್ನೆಲೆಯಲ್ಲಿ ಬುಧವಾರ ತುರ್ತು ಸಭೆ ಕರೆದಿದ್ದ ಡಿ.ಕೆ.ಶಿವಕುಮಾರ್, ಹಳೆಯ ಪದಾಧಿಕಾರಿಗಳು ಮತ್ತು ಹಾಲಿ ಪದಾಧಿಕಾರಿಗಳು ಆಹ್ವಾನಿಸಿ ಚರ್ಚೆ ನಡೆಸಿದರು.
ನಿಗಮ ಮಂಡಳಿಗಳ ನೇಮಕ ಪ್ರಕ್ರಿಯೆ ಇಷ್ಟರಲ್ಲೇ ನಡೆಯಲಿದೆ. ಕೆಲವರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ, ಮತ್ತೆ ಕೆಲವರನ್ನು ಪಕ್ಷದಲ್ಲಿ ಜವಾಬ್ದಾರಿ ನೀಡಲಾಗುತ್ತದೆ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುತ್ತದೆ, ಎಲ್ಲರ ರಕ್ಷಣೆಗೆ ನಾನಿದ್ದೇನೆ. ಯಾರೂ ದೃತಿಗೆಡುವುದು ಬೇಡ ಎಂದು ಭರವಸೆ ನೀಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ವಿಜಯ್ ಮುಳುಗುಂದ್, ಸತ್ಯನಾರಾಯಣ್, ಆಗಾ ಸುಲ್ತಾನ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 4 =
Remember me
