ಬೆಂಗಳೂರು:ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರೇ ಹೊರತು, ಬೇರೆ ಯಾರೂ ಅಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಜನರೇ ನನ್ನ ಹಿಂದಿರುವ ಶಕ್ತಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆ ಬಗ್ಗೆ ಪ್ರಸ್ತಾಪಿಸಿ, ಯೋಗೇಶ್ವರ್ ದೊಡ್ಡವರು. ಅವರ ಮಾತಿಗೆ ಪ್ರತಿಕ್ರಿಯಿಸುವಷ್ಟು ಸಮಯ ನನ್ನ ಬಳಿ ಇಲ್ಲ ಎಂದರು.ನಾನೂ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ ಎಂದರು.ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಸುರೇಶ್ ಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಯಾಕೆ ಉಪಚುನಾವಣೆ ನಡೆಯುತ್ತದೆ. ನಾನು ಕನಕಪುರದ ಶಾಸಕ ಎಂದು ಮಾರ್ಮಿಕವಾಗಿ ಉತ್ತರಿಸಿದರು. ಆ ಮೂಲಕ ಚನ್ನಪಟ್ಟಣದಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ ಎನ್ನುವ ಪರೋಕ್ಷ ಸೂಚನೆಯನ್ನು ನೀಡಿದ್ದಾರೆ.ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಇದೂ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ ಎಂದು ಅವರು ವಿವರಣೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − three =
Remember me
