ಬೆಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರೋನಾದಿಂದಾಗಿ ಜನ ಸಾಮಾನ್ಯರ ಬದುಕು ದಯನೀಯ ಸ್ಥಿತಿಯಲ್ಲಿದ್ದು, ಈ ಸಮಯದಲ್ಲಿ ವಿದ್ಯುತ್ ದರ ಹೆಚ್ಚಿಸುವ ಸರ್ಕಾರದ ನಿರ್ಧಾರ ಖಂಡನೀಯ. ಈ ತೀರ್ಮಾನವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ದರ ಹೆಚ್ಚಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ಒಂದು ವಾರದ ಒಳಗಾಗಿ ಕೈಬಿಡದಿದ್ದರೆ, ನ.17ರಿಂದ 20ರವರೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಎಸ್ಕಾಂ ಸಂಸ್ಥೆಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಜತೆಗೆ 23ರಿಂದ 28ರವರೆಗೆ ಒಂದು ದಿನ ಪ್ರತಿ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಇದನ್ನೂ ಓದಿ:ಕಳ್ಳ ಮಗ ತಪ್ಪಿಸಿಕೊಂಡ- ಪೊಲೀಸರಿಗೆ ಖಾರದ ಪುಡಿ ಎರಚಿದ ಅಮ್ಮ ಸಿಕ್ಕಿಬಿದ್ಲು
ಕರೊನಾದಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಉದ್ಯಮ ನಡೆಸುತ್ತಿರುವವರಿಂದ ಸಣ್ಣ ವ್ಯಾಪಾರಿಗಳವರೆಗೂ, ಉದ್ಯೋಗದಾತರಿಂದ ಉದ್ಯೋಗಿಗಳವರೆಗೂ, ಪ್ರತಿ ವರ್ಗದ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಜನ ಕೆಲಸ ಇಲ್ಲದೆ, ಆದಾಯ ಇಲ್ಲದೆ ಕಂಗಾಲಾಗಿದ್ದಾರೆ ಎಂದರು.ಈ ಸಮಯದಲ್ಲಿ ಪಾಲಿಕೆ, ಪಂಚಾಯ್ತಿ ಮಟ್ಟದಲ್ಲಿ ಒಂದು ವರ್ಷ ಆಸ್ತಿ ತೆರಿಗೆ ರದ್ದು ಮಾಡಿ ಎಂದು ಕೇಳಿದೆವು. ಇದಕ್ಕೆ ಸರ್ಕಾರ ಸ್ಪಂದಿಸಲಿಲ್ಲ. ಈ ಮಧ್ಯೆ ಎಲ್ಲ ವಹಿವಾಟಿಗೂ ಸರ್ಕಾರ ನಿರ್ಬಂಧ ಹೇರಿತ್ತು. ಎಲ್ಲರೂ ಇದಕ್ಕೆ ಸಹಕಾರ ನೀಡಿದ್ದರು ಆದರೆ ಕಷ್ಟಕಾಲದಲ್ಲಿ ಜನರಿಗೆ ಸರ್ಕಾರ ನೆರವಾಗುತ್ತಿಲ್ಲ ಎಂದು ಟೀಕಿಸಿದರು.
ಇದನ್ನೂ ಓದಿ:ಇದೇನು ನದಿಯೋ ಅಥವಾ ರಕ್ತದೋಕಳಿಯೋ? ಗಾಬರಿಯಿಂದ ಕಂಗಾಲಾದ ಸ್ಥಳೀಯರು
ರಾಜ್ಯದಲ್ಲಿ ಮಳೆ ಹೆಚ್ಚಾದಾಗ ಹಾಗೂ ಸೌರಶಕ್ತಿಯಿಂದ ವಿದ್ಯುತ್ ಹೆಚ್ಚಾಗಿ ಉತ್ಪಾದನೆ ಮಾಡುವುದನ್ನು ನಾವು ನೋಡಿದ್ದೇವೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಿಸಲು ಸರ್ಕಾರ ಕೆಇಆರ್‌ಸಿಗೆ ತಿಳಿಸಿತ್ತು. ನಂತರ ಸಂಸ್ಥೆ ಪ್ರತಿ ಯೂನಿಟ್‌ಗೆ 40 ಪೈಸೆ ಹೆಚ್ಚಿಸಿದೆ. ನಾನು ಪಕ್ಷದ ಪರವಾಗಿ, ರಾಜ್ಯದ ಆರೂವರೆ ಕೋಟಿ ಜನರ ಪರವಾಗಿ, ಈ ಜನ ವಿರೋಧಿ ನಿರ್ಧಾರವನ್ನು ಖಂಡಿಸುತ್ತೇನೆ. ಇದು ಕೈಗಾರಿಕೆ, ವ್ಯಾಪಾರಿ, ರೈತರು ಹಾಗೂ ಮಧ್ಯಮ ವರ್ಗದ ಜನರ ವಿರುದ್ಧ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರ ಕೂಡಲೇ ಈ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ ಎಂದ ಅವರು ಮುಂದಿನ ಒಂದೂವರೆ ವರ್ಷಗಳ ಕಾಲ ಇಂತಹ ತೀರ್ಮಾನ ತೆಗೆದುಕೊಳ್ಳಬಾರದು ಎಂದು ಜನರ ಧ್ವನಿಯಾಗಿ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಈಗ ಇರುವ ದರವನ್ನೇ ಮುಂದುವರಿಸಬೇಕು ಎಂದು ಹೇಳಿದರು.
‘ಇದನ್ನೂ ಓದಿ:ಬೈಡೆನ್​ ಗೆಲುವಿನಿಂದ ಹಿರಿಹಿರಿ ಹಿಗ್ಗಿದರೂ ಅಭಿನಂದಿಸದೇ ಮೌನಕ್ಕೆ ಜಾರಿದ ಚೀನಾ!
ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಮಾಧ್ಯಮ ವಿಭಾಗದ ಮುಖ್ಯಸ್ಥ ಡಾ. ಬಿ.ಎಲ್. ಶಂಕರ್, ಸಹ ಅಧ್ಯಕ್ಷ ವಿ.ಆರ್. ಸುದರ್ಶನ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಉಪಸ್ಥಿತರಿದ್ದರು.
VIDEO| ಟೋಲ್ ಗೇಟ್​ನಲ್ಲಿ ಧಗಧಗನೆ ಹೊತ್ತಿ ಉರಿದ ಲಾರಿ! ಬೆಚ್ಚಿಬಿದ್ದ ಜನತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + fourteen =
Remember me
