ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿನ್ನೆ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ಚುನಾವಣಾ ನೀತಿ ಸಂತಿಹೆ ಜಾರಿಯಲ್ಲಿರುವುದರಿಂದ ಅಧಿಕಾರಿಗಳು ಡಿಕೆಶಿ ಪತ್ನಿ ಬಂದಿದ್ದ ಹೆಲಿಕಾಫ್ಟರ್ ಪರಿಶೀಲನೆ ಮುಂದಾದ ವೇಳೆ ಪೈಲಟ್ ನಿರಾಕರಿಸಿದ್ದರು. ಈ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಇದು ಖಾಸಗಿ ಹೆಲಿಕಾಪ್ಟರ್, ಪರಿಶೀಲಿಸಲು ಅವಕಾಶವಿಲ್ಲವೆಂದು ಪೈಲಟ್ ವಾದಿಸಿದ್ದರು.
ಇದನ್ನೂ ಓದಿ:ಡಿಕೆಶಿಗೆ ಸವಾಲ್ ಹಾಕುತ್ತೇನೆ… ಲಿಂಗಾಯತ ಡ್ಯಾಂನಿಂದ ಒಂದು ಚಿಪ್ಪು ಕಲ್ಲನ್ನೂ ತೆಗೆಯಲು ಸಾಧ್ಯವಿಲ್ಲ; ಯತ್ನಾಳ್
ಇಂದು ಕೂಡ ಚುನಾವಣಾ ಅಧಿಕಾರಿಗಳು ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನ್ನು ಪರಿಶೀಲನೆ ನಡೆಸಿದ್ದಾರೆ. ಇದು ಡಿ.ಕೆ.ಶಿವಕುಮಾರ್ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ಅನ್ನೇ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು.pic.twitter.com/BSwUJjhmHP
ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ತೆರಳಲು ಅನುವು ಮಾಡಿಕೊಡಬೇಕು ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೇಳಿಕೆ ತಿರುಚಿದ್ದಾರೆ; ವಿವಾದ ಬಳಿಕ ಸಿದ್ದರಾಮಯ್ಯ ಸ್ಪಷ್ಟನೆ
ಅಭ್ಯರ್ಥಿಗಳೆಲ್ಲ ನಾಮಪತ್ರ ಸಲ್ಲಿಸಿದ್ದು, ಇದೀಗ ಚುನಾವಣೆ ದಿನಕ್ಕೆ ಎದರು ನೋಡುತ್ತಿದ್ದಾರೆ. ಪಕ್ಷದ ಪ್ರಮುಖ ನಾಯಕರು ಇದೀಗ ರೋಡ್​ ಶೋ ಮೂಲಕ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಶತಾಯಗತಾಯ ಈ ಬಾರಿ ಕಾಂಗ್ರೆಸ್​​ನ್ನು ಅಧಿಕಾರ ತರಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಧರ್ಮಸ್ಥಳ, ಶೃಂಗೇರಿ ದೇವಸ್ಥಾನಗಳಿಗೆ ಡಿಕೆಶಿ ಕುಟುಂಬ ಸಮೇತ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five − three =
Remember me
