ಬೆಂಗಳೂರು:ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ ನಡೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.
ಗುತ್ತಿಗೆದಾರನ ಮನೆ ಐಟಿ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಇಲ್ಲದೆ ಯಾವ ಐಟಿ ದಾಳಿ ನಡೆಯುವುದಿಲ್ಲ. ಕೇವಲ ನಮ್ಮಲ್ಲಿ ಮಾತ್ರ ಅಲ್ಲ ಬೇರೆ ರಾಜ್ಯಗಳಲ್ಲೂ ರಾಜಕೀಯ ಪ್ರೇರಿತ ಐಟಿ ದಾಳಿ ಆಗುತ್ತಿವೆ ಎಂದು ಆರೋಪಿಸಿದ್ದಾರೆ. ಬಿಬಿಎಂಪಿಯಿಂದ ಬಿಡುಗಡೆಯಾದ 650 ಕೋಟಿ ಅನುದಾನದಲ್ಲಿ ಪಡೆದ ಕಮಿಷನ್ ಹಣವನ್ನು ಅಂಬಿಕಾಪತಿ ಮೂಲಕ ಕಳಿಸುತ್ತಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನನಗೆ ಹೆಚ್ಚಾಗಿ ಗೊತ್ತಿಲ್ಲಾ ಎಂದು ಹೇಳಿದ್ದಾರೆ.
ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮನವಿ ಕುರಿತು ಪ್ರತಿಕ್ರಿಯಿಸಿ, ಬಿಲ್ ಪಾವತಿ ವಿಚಾರದಲ್ಲಿ ಕೆಂಪಣ್ಣ ಅವರು ಆತಂಕ ಪಡುವ ಅಗತ್ಯವಿಲ್ಲ. ಏನಾದರೂ ಇದ್ದರೆ ಬಂದು ನಮ್ಮ ಬಳಿ ಮಾತನಾಡಲಿ. ನಾವು ನ್ಯಾಯ ಒದಗಿಸುತ್ತೇವೆ. ಕೆಂಪಣ್ಣ ಅವರ ಮನವಿ ಮೇರೆಗೆ ನಾವು ತನಿಖೆ ಪಕ್ಕಕ್ಕಿಟ್ಟು, ಆದ್ಯತೆ ಮೇರೆಗೆ ಕಾಮಗಾರಿಗಳ 60-70% ಹಣ ಬಿಡುಗಡೆ ಮಾಡಿದ್ದೇವೆ. ಬಿಲ್ ಪಾವತಿ ಸಮಯದಲ್ಲಿ ಜಿಎಸ್ ಟಿ ಕೂಡ ಪಾವತಿ ಮಾಡಬೇಕು ಹೀಗಾಗಿ ತನಿಖೆ ವರದಿ ಬರುವ ಮುನ್ನವೇ ನಾವು ಸುಮಾರು ಮುಕ್ಕಾಲು ಭಾಗ ಹಣ ಬಿಡುಗಡೆ ಮಾಡಿದ್ದೇವೆ.
ಇದನ್ನೂ ಓದಿ:ಪ್ರೇಯಸಿಗೆ ಚೂರಿಯಿಂದ ಇರಿದ ಪಾಗಲ್ ಪ್ರೇಮಿ; ಆರೋಪಿಯನ್ನು ಹಿಡಿದ ಕ್ಯಾಬ್ ಚಾಲಕ
ಲೋಡ್ ಶೆಡ್ಡಿಂಗ್ ವಿಚಾರವಾಗಿ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ನಾವು ಅಧಿಕಾರದಲ್ಲಿ ಇದ್ದಾಗ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು, ಬಿಜೆಪಿ ಅವರ ಅವಧಿಯಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಆಗಿದೆ ಎಂಬ ಮಾಹಿತಿ ನನ್ನ ಬಳಿ ಇದೆ. ಮುಖ್ಯಮಂತ್ರಿಗಳ ಸಭೆ ಬಳಿಕ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಕಳಿಸಲಾಗುತ್ತಿದೆ ಎಂಬ ಮಾಜಿ ಸಚಿವ ಅಶ್ವಥ್ ನಾರಾಯಣ ಅವರ ಆರೋಪದ ಕುರಿತು ಪ್ರತಿಕ್ರಿಯಿಸಿ, ಹಾದಿ ಬೀದಿಯಲ್ಲಿ ಹೋಗುವವರ ಮಾತಿಗೆ ನಾನು ಉತ್ತರಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + five =
Remember me
