ತುಮಕೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ಬಸನ್​ಗೌಡ ದದ್ದಲ್​ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದು, ದಾಖಲಾತಿ ಸೇರಿದಂತೆ ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇಡಿ ಮಧ್ಯಪ್ರವೇಶಿಸುವ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ನೊಣವಿನಕೆರೆಯಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: ಆತ ಯಾರೆಂಬುದೇ ನನಗೆ ತಿಳಿದಿಲ್ಲ; ಭಾರತದ ಆಟಗಾರನ ಕುರಿತು ಯೂಟ್ಯೂಬರ್​ನ ಪ್ರಶ್ನೆಗೆ ದಿಗ್ಗಜ ಫುಟ್ಬಾಲ್​ ಆಟಗಾರನ ಉತ್ತರ ವೈರಲ್​
ಈಗಾಗಲೇ ಎಸ್‌ಐಟಿ ರಚಿಸಿ, ತನಿಖೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಇ.ಡಿ ಅಧಿಕಾರಿಗಳು ದಾಳಿ ಮಾಡುವ ಅಗತ್ಯತೆ ಇರಲಿಲ್ಲ. ಆದರೂ ಮಧ್ಯಪ್ರವೇಶಿಸಿದ್ದಾರೆ. ನಮ್ಮ ಎಸ್‌ಐಟಿ ಅಧಿಕಾರಿಗಳು ಸಮರ್ಥವಾಗಿ ತನಿಖೆ ಮಾಡುತ್ತಿದ್ದಾರೆ. ನಿಗಮದಲ್ಲಿ ಅಧಿಕಾರಿಗಳು ಹಣ ದುರುಪಯೋಗ ಮಾಡಿಕೊಂಡಿರುವುದು ಗೊತ್ತಾಗಿದೆ.
ಸಚಿವರು, ಶಾಸಕರ ಕೈವಾಡ ಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲಿದ್ದಾರೆ. ಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ, ನಾವು ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 7 =
Remember me
