ಬೆಂಗಳೂರು:ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ.
ವಿಧಾನಸೌಧದೊಳಗೆ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಬಿಜೆಪಿಯವರು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ. ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಇದನ್ನು ತಿರುಚುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ.
As per the directions of the Congress high command, I am reaching#HimachalPradesh.Also there is absolutely no need to indulge in any hearsay, as I am confident that Congress Party legislators will be loyal to the party and stay put with the mandate that has been accorded to…
ಇದನ್ನೂ ಓದಿ:ಒನ್​ವೇಯಲ್ಲಿ ಹೋಗಬಾರದೆಂದ ಪೊಲೀಸ್​ ಅಧಿಕಾರಿ ಮೇಲೆ ಹಲ್ಲೆ ಮಾಡಿದ ಖ್ಯಾತ ನಟಿ; ವಿಡಿಯೋ ವೈರಲ್
ಈ ವಿಚಾರವಾಗಿ ತನಿಖೆ ಮಾಡುವಂತೆ ನಾವು ಸೂಚಿಸಿದ್ದೇವೆ. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಸುಳ್ಳು ಹಬ್ಬಿಸಿದ್ದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನದ ಬಗ್ಗೆ ಪ್ರತಿಕ್ರಿಯಿಸಿ, ನಾನು ಅಲ್ಲಿಗೆ ಹೋಗುವ ಬಗ್ಗೆ ಕಾಂಗ್ರೆಸ್ ಪಕ್ಷ ನನಗೆ ಸೂಚನೆ ನೀಡಿದ್ದು, ಅದರಂತೆ ತೆರಳುತ್ತಿದ್ದೇನೆ. ಎರಡು ಮೂರು ರಾಜ್ಯಗಳಲ್ಲಿ ಸರ್ಕಾರ ಕೆಡವಲು ಬಿಜೆಪಿ ಆತುರದಲ್ಲಿದೆ. ಪ್ರಜಾಪ್ರಭುತ್ವದಲ್ಲಿ ಬಲಿಷ್ಠ ವಿರೋಧ ಪಕ್ಷ ಇರಬೇಕು. ಈ ದೇಶದಲ್ಲಿ ಕೆಟ್ಟ ಸಂಪ್ರದಾಯವನ್ನು ಬಿಜೆಪಿ ಪಾಲಿಸುತ್ತದೆ. ನಮ್ಮ ಪಕ್ಷದ ಎಲ್ಲಾ ಶಾಸಕರು ನಮ್ಮ ಜತೆಯೇ ಇರುತ್ತಾರೆ. ಪಕ್ಷಕ್ಕೆ ನಿಷ್ಠರಾಗಿ ಇರುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 7 =
Remember me
