ಬೆಂಗಳೂರು:ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದ್ದು,  ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದೆ. ಇನ್ನೂ ಈ ಕುರಿತು ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ಪ್ರಾಥಮಿಕ ತನಿಖೆ ನಡೆಯದಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿ ಮಾಡುವ ಕೆಲಸ ಆಗ್ತಿದೆ. ಸಂವಿಧಾನದ ರಕ್ಷಣೆ ಮಾಡುತ್ತೇವೆ. ಗ್ಯಾರಂಟಿ ಯೋಜನೆ ಮೂಲಕ ಬಡವರಿಗೆ ಸಹಾಯ ಮಾಡ್ತಿದ್ದೇವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪಂಜಾಬ್​ನಲ್ಲೂ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಮಾಡಲಾಗ್ತಿದೆ. ಇಂಡಿಯಾ ಒಕ್ಕೂಟ ಕೂಡ ಸಿಎಂ ಸಿದ್ದರಾಮಯ್ಯ ಪರ ಇದೆ. ನಾನು ಸಿಎಂ ಸಿದ್ದರಾಮಯ್ಯ ಪರ ಇದ್ದೇನೆ.
ಇಂದು ಬೆಳಗ್ಗೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವಕ್ಕೆ ಮಾರಕವಾದ ನಿರ್ಧಾರ ರಾಜ್ಯಪಾಲರು ಕೈಗೊಂಡಿದ್ದಾರೆ. ಶೋಕಾಸ್​ ನೋಟಿಸ್​ಗೆ ಈಗಾಗಲೇ ನಾವೆಲ್ಲಾ ಉತ್ತರ ಕೊಟ್ಟಿದ್ದೇವೆ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲ ಉತ್ತರ ಕೊಟ್ಟಿದ್ದೇವೆ. ರಾಜಕೀಯ ಪ್ರೇರಿತವಾದ ದೂರನ್ನು ಪರಿಗಣಿಸಬೇಡಿ ಎಂದು ನಾವು ಹೇಳಿದ್ದೇವೆ. ಜ್ಯಪಾಲರ ಹುದ್ದೆಗೆ ಬಹಳ ಗೌರವ ಇದೆ. ಇಡೀ ಸರ್ಕಾರ ರಾಜ್ಯಪಾಲರ ಮಾರ್ಗದರ್ಶನದಲ್ಲಿ ನಡೆಯುತ್ತದೆ.
ಇದನ್ನೂ ಓದಿ:ಜಾಗತಿಕ ಮಟ್ಟದಲ್ಲಿ ಪಾಕ್​ಗೆ ಮತ್ತೊಮ್ಮೆ ಮುಖಭಂಗ; 26/11 ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸಲು US ಕೋರ್ಟ್​ ಅಸ್ತು
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಇಡೀ ಸರ್ಕಾರ, ಸಚಿವ ಸಂಪುಟ, ಪಕ್ಷ ಸಿಎಂ ಬೆಂಬಲಕ್ಕೆ ಇದೆ. ಕಾನೂನು ಚೌಕಟ್ಟಿನಲ್ಲೂ ಹೋರಾಟ ಮಾಡುತ್ತೇವೆ. ರಾಜಕೀಯವಾಗಿಯೂ ನಾವು ಹೋರಾಟ ಮಾಡುತ್ತೇವೆ. ಕಾನೂನು ಬಗ್ಗೆ ನಮಗೆ ಗೌರವವಿದೆ, ರಕ್ಷಣೆ ಸಿಗುತ್ತೆ ಎಂಬ ನಂಬಿಕೆ ನಮಗಿದೆ. ರಾಜ್ಯದ ಜನರು 136 ಶಾಸಕರನ್ನು ಗೆಲ್ಲಿಸಿದ್ದಾರೆ. ಈ ಹಿಂದೆ ಕೇಂದ್ರ ಸಚಿವರಾದ ಜೋಶಿ, ಕುಮಾರಸ್ವಾಮಿ ಮಾತನಾಡಿದ್ದರು. ಅದಕ್ಕೆ ಪೂರಕವಾಗಿ ಸರ್ಕಾರ ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದೆ.
ಯಡಿಯೂರಪ್ಪ, ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಬಿಜೆಪಿಯ ನಾಯಕರ ವಿರುದ್ಧವೂ ಪ್ರಾಸಿಕ್ಯೂಷನ್​​ಗೆ ಅನುಮತಿ ಕೇಳಲಾಗಿತ್ತು. ಸೂಕ್ತ ತನಿಖೆ ನಡೆಸಿ ಅನುಮತಿ ಕೇಳಿದ್ರೂ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಆದರೆ ಈಗ ಸಿಎಂ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ರಾಜ್ಯಪಾಲರ ನಡೆಯನ್ನು ಖಂಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
