
ಬೆಂಗಳೂರು:ಸಿಬಿಐ ತನಿಖೆ ಮುಂದುವರಿಸಲು ಹೈಕೋರ್ಟ್ ಅನುಮತಿ ನೀಡಿರುವ ಕಾರಣ ಕೂಡಲೆ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿ, ಉನ್ನತ ಹುದ್ದೆಯಲ್ಲಿರುವ ಡಿಸಿಎಂ, ಸಾಕ್ಷ್ಯಾಧಾರಗಳನ್ನು ಮುಚ್ಚಿ ಹಾಕುವ ಎಲ್ಲ ಸಾಧ್ಯತೆಗಳಿವೆ. ಆದ್ದರಿಂದ ತುರ್ತಾಗಿ ಸಿಎಂ ರಾಜೀನಾಮೆ ಪಡೆಯಬೇಕು. ನಾವು ಕೂಡ ರಾಜೀನಾಮೆಗೆ ಆಗ್ರಹಿಸಿ, ರಾಜ್ಯಪಾಲರನ್ನೂ ಭೇಟಿ ಮಾಡಿ ಒತ್ತಾಯಿಸಲಿದ್ದೇವೆ ಎಂದರು.ಸಿದ್ದರಾಮಯ್ಯರನ್ನು ಹೇಗಾದರೂ ಮನೆಗೆ ಕಳುಹಿಸಿ ನಾನು ಸಿಎಂ ಆಗಬೇಕೆಂದು ಹೊರಟಿದ್ದ ಡಿಕೆಶಿಗೆ ಹೈಕೋರ್ಟ್ ತೀರ್ಪು ಬೇಸರವಾಗಿದೆ. ಹಾಗೆಯೆ ಸಿದ್ದರಾಮಯ್ಯ ಪಾಲಿಗೆ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ ಕಾಣುತ್ತಿದೆ ಎಂದರು.ಬಿಜೆಪಿ ನಾಯಕರು ಸುಳ್ಳಮಳ್ಳ ನಾಯಕರು ಎಂಬ ರಾಮಲಿಂಗಾರೆಡ್ಡಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುಳ್ಳ ಯಾರು ಮಳ್ಳ ಯಾರೆಂದು ಬೆಂಗಳೂರಿನ ಜನರು ಹೇಳುತ್ತಾರೆ. ಮೆತ್ತಮೆತ್ತಗೆ ಏನೇನು ಮಾಡುತ್ತಾರೋ ಅವರನ್ನು ಮಳ್ಳ ಎನ್ನುತ್ತಾರೆ. ರಾಮಲಿಂಗಾರೆಡ್ಡಿಯವರೇ ನಿಮ್ಮನ್ನೇ ಎಲ್ಲರೂ ಮಳ್ಳ ಎಂದು ಹೇಳುತ್ತಿದ್ದಾರೆ. ಸುಳ್ಳ ಎಂದು ಸಿದ್ದರಾಮಯ್ಯ ಮತ್ತು ಕ್ಯಾಂಪ್ ಪ್ರಸಿದ್ಧಿ ಪಡೆದಿದೆ ಎಂದು ತಿರುಗೇಟು ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
