ಹಾಸನ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಿವಾಸದ ಜತೆಗೆ ಅವರ ಆಪ್ತ ಉದ್ಯಮಿ ಸಚಿನ್ ನಾರಾಯಣ್​ರ ಮನೆ ಮೇಲೂ ಸಿಬಿಐ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ನಗರದ ಬಿ.ಎಂ. ರಸ್ತೆಯ ಸಿಲ್ವರ್ ಜ್ಯುಬಿಲಿ ಪಾರ್ಕ್ ಬಳಿಯಿರುವ ಮನೆ ಮೇಲೆ ಬೆಳಗ್ಗೆಯೇ ಐವರು ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಜಿಲ್ಲೆಯ ಪ್ರತಿಷ್ಠಿತ ಉದ್ಯಮಿ ದಿ. ನಾರಾಯಣ್​ರ ಕೊನೆಯ ಪುತ್ರ ಸಚಿನ್ ನಾರಾಯಣ್ ಅವರು ಡಿಕೆಶಿ ಆಪ್ತ. ಜತೆಗೆ ಇವರ ವ್ಯವಹಾರಗಳ ಪಾಲುದಾರರೂ ಹೌದು.ಸಿಬಿಐ ದಾಳಿ ವೇಳೆ ಸಚಿನ್ ಸಹೋದರ ಚೇತನ್ ನಾರಾಯಣ್ ಅವರು ಮನೆಯಲ್ಲಿದ್ದು ವಿಚಾರಣೆಗೆ ಸಹಕರಿಸುತ್ತಿದ್ದಾರೆ.
ಈ ಹಿಂದೆ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ಆದಾಗಲೂ ಸಚಿನ್ ನಿವಾಸದ ಮೇಲೂ ದಾಳಿ ನಡೆದಿತ್ತು. ಪ್ರಕರಣದಲ್ಲಿ ಅವರು ಇನ್ನೂ ವಿಚಾರಣೆ ಎದುರಿಸುತ್ತಿದ್ದಾರೆ. ಸಚಿನ್ ಅವರು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ.ಶಿವರಾಮು ಅಳಿಯ.
ಡಿಕೆಶಿ ಅವರ ಬೆಂಗಳೂರು ಮತ್ತು ಕನಕಕಪುರ ನಿವಾಸದ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆಯೇ ರೇಡ್​ ಮಾಡಿದ ಸಿಬಿಐ ಅಧಿಕಾರಿಗಳು ಶಾಕ್​ ಕೊಟ್ಟಿದ್ದರು. ಅಲ್ಲದೆ ಅವರ ಸಹೋದರ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್​ರ ನಿವಾಸದ ಮೇಲೂ ಏಕಕಾಲಕ್ಕೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಒಟ್ಟು 14 ಕಡೆ ದಾಳಿ ಆಗಿದ್ದು, ಪರಿಶೀಲನೆ ನಡೆಸುತ್ತಿದೆ.
ಡಿಕೆಶಿಗೆ ಡಬಲ್​ ಶಾಕ್​! ಆದಾಯ ಮೀರಿ ಆಸ್ತಿ ಗಳಿಕೆ ಆರೋಪ- ದಾಖಲಾಯ್ತು ಎಫ್​ಐಆರ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − fifteen =
Remember me
