ಬೆಂಗಳೂರು:ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ:ದೆಹಲಿಯ 3 ಮಾಲ್, ಒಂದು ಆಸ್ಪತ್ರೆಗೆ ಬಾಂಬ್ ಬೆದರಿಕೆ ಇ-ಮೇಲ್: ಅಧಿಕಾರಿಗಳಿಂದ ವ್ಯಾಪಕ ಶೋಧ
ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನಿರಬಹುದು ಎಂಬ ಪ್ರಶ್ನೆಗೆ ಶೇಷಾದ್ರಿಪುರ ಜಂಕ್ಷನ್ ಬಳಿ ರಾಜೀವ್ ಗಾಂಧಿ ಅವರ ಪ್ರತಿಮೆಗೆ ಮಂಗಳವಾರ ಪುಷ್ಪನಮನ ಸಲ್ಲಿಸಿದ ನಂತರ ಅವರು ಉತ್ತರಿಸಿದ್ದಾರೆ.
ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇವೆಲ್ಲ ಸಾಕ್ಷಿ” ಎಂದು ತಿರುಗೇಟು ನೀಡಿದರು.
“ಮಾಜಿ ಪ್ರಧಾನ ಮಂತ್ರಿಗಳಾದ ರಾಜೀವ್ ಗಾಂಧಿ ಅವರ ಆಲೋಚನೆಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿ. ಆದ ಕಾರಣ ಪ್ರತಿ ವರ್ಷ ಇವರ ಜನ್ಮದಿನವನ್ನು ಬಿಬಿಎಂಪಿಯಿಂದ ನಡೆಸಬೇಕು ಎಂದು ಆದೇಶ ನೀಡಲಾಗುವುದು” ಎಂದರು.
“ಪಂಚಾಯತ್ ಮಟ್ಟದಿಂದ ಪಾರ್ಲಿಮೆಂಟ್ ವರೆಗೆ ನಾಯಕರು ರಾಜೀವ್ ಗಾಂಧಿ ಅವರನ್ನು ಮರೆಯುವಂತಿಲ್ಲ. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ತಕ್ಷಣ ರಾಜೀವ್ ಗಾಂಧಿಯವರ ನೂತನ ಪ್ರತಿಮೆ ನಿರ್ಮಾಣಕ್ಕೆ ಸಹಿ ಹಾಕಿದೆ. ದಿನೇಶ್ ಗುಂಡೂರಾವ್ ಅವರ ಇಚ್ಛೆಯಂತೆ, ಅವರ ಕ್ಷೇತ್ರ ವ್ಯಾಪ್ತಿಯ ಶೇಷಾದ್ರಿಪುರಂ ಸಿಗ್ನಲ್ ಮುಕ್ತ ಜಂಕ್ಷನ್ ಗೆ ರಾಜೀವ್ ಗಾಂಧಿ ಹೆಸರಿಟ್ಟು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಲಾಗಿತ್ತು” ಎಂದರು.
“18 ವರ್ಷಕ್ಕೆ ಮತದಾನದ ಹಕ್ಕು, ಪಂಚಾಯತ್ ರಾಜ್ ತಿದ್ದುಪಡಿ, ಐಟಿ ಬಿಟಿ ಬೆಳವಣಿಗೆಗೂ ಇವರೇ ಕಾರಣ. ಇಂದು ಎಲ್ಲರ ಬಳಿ ಎರಡೆರಡು ಮೊಬೈಲ್ ಗಳಿವೆ. ಇದಕ್ಕೆ ಕಾರಣ ರಾಜೀವ್ ಗಾಂಧಿಯವರ ದೂರದೃಷ್ಟಿಯ ಟೆಲಿಫೋನ್ ಕ್ರಾಂತಿ ಕಾರಣ” ಎಂದು ಹೇಳಿದರು. “ದೇಶದ ಸಮಗ್ರತೆ ಐಕ್ಯತೆ ಶಾಂತಿಗಾಗಿ ನೆಹರು ಕುಟುಂಬ ದುಡಿದಿದೆ. ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ವಿಚಾರಗಳನ್ನು ನಾವು ಮರೆಯಬಾರದು ” ಎಂದು ತಿಳಿಸಿದರು.
ವಿಧಾನಸಭೆ ಚುನಾವಣೆ: ಆಗಸ್ಟ್​ 21-22ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಖರ್ಗೆ, ರಾಹುಲ್ ಗಾಂಧಿ ಭೇಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 18 =
Remember me
