ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರವು 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಹಾಗೂ ಡಿಪ್ಲೊಮ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವ ಸಲುವಾಗಿ ‘ಯುವ ನಿಧಿ ಯೋಜನೆ’ಯನ್ನು ಜಾರಿಗಳಿಸಿದೆ. ಈಗಾಗಲೇ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ. ಈ ಯೋಜನೆಯಿಂದಾಗಿ ಯುವಜನತೆ ಸೋಮಾರಿ ಆಗುತ್ತದೆ ಎನ್ನುವಂತಹ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಶಕ್ತಿ ಯೋಜನೆಯನ್ನು ಜಾರಿಗೊಳಿಸಿ ಉದ್ಘಾಟನೆ ಮಾಡಿರುವ ಕಾಂಗ್ರೆಸ್ ಪಕ್ಷದ ಸರ್ಕಾರ, ಎಲ್ಲಾ ರಾಜ್ಯದ ಮಹಿಳೆಯರಿಗೂ ಕರ್ನಾಟಕದ ತುಂಬ ಉಚಿತವಾಗಿ ಓಡಾಡಲು ವ್ಯವಸ್ಥೆ ಮಾಡಿಕೊಟ್ಟಿದೆ. ಇದೇ ರೀತಿ ಪದವೀಧರ ಹಾಗೂ ಡಿಪ್ಲೋಮಾ ಹೊಂದಿರುವ ಯುವಕರಿಗೆ ಯುವನಿಧಿಯನ್ನು ನೀಡುವ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆಶಿ, “ಯುವಕರನ್ನ ಸೋಂಬೇರಿ ಮಾಡಲು ನಾವು ತಯಾರಿಲ್ಲ. 24 ತಿಂಗಳಲ್ಲಿ ಅವನು ಒಂದು ದಾರಿ ಹುಡುಕಬೇಕು. ಛಲ ಇರಬೇಕು. ಅವನು ಉದ್ಯೋಗ ಹುಡುಕಿಕೊಳ್ಳಬೇಕು. ಸ್ಕೀಲ್ ಡೆವಲ್ಪಂಟ್ ಮಾಡಬೇಕು” ಎಂದು ಹೇಳಿದ್ದಾರೆ.
ಇದೇ ವೇಳೆ ಕೌಶಲ್ಯಾಭಿವೃದ್ಧಿ ಯೋಜನೆಯ ತರಬೇತಿಯಲ್ಲಿ ಅಕ್ರಮ ನಡೆದಿದೆ ಎಂದು ಪ್ರಸ್ತಾಪ ಮಾಡಿರುವ ಡಿಕೆ ಶಿವಕುಮಾರ್, “ಕೌಶಲ್ಯಾಭಿವೃದ್ಧಿ ಯೋಜನೆಯ ತರಬೇತಿಯಲ್ಲಿ ಹಿಂದೆ ಸಾಕಷ್ಟು ಅವ್ಯವಹಾರ ಆಗಿದೆ. ಒಂದೊಂದು ಅಕೌಂಟ್ ಗೆ 50 ಸಾವಿರ, 30 ಸಾವಿರ ಹೋಗಿದೆ” ಎಂದು ಹೇಳಿದ್ದಾರೆ. ಆದರೆ ಅವರು ಈಗ ಆ ಬಗ್ಗೆ ಗಮನ ಹರಿಸದೇ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
