ಬೆಂಗಳೂರು:ಕೆಲವು ಮೆಂಟಲ್ಗಳು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಚುನಾವಣೆಯನ್ನು ಕಡಲೆಪುರಿ ವ್ಯಾಪಾರ ಎಂದು ಭಾವಿಸಿ 20, 30 ಎಂದು ನಂಬರ್ ಹೇಳುತ್ತಿದ್ದಾರೆ ಎಂದು ಬಿಜೆಪಿಗೆ ವಲಸೆ ಹೋಗಿ ಸಚಿವರಾದವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಮತ್ತಿತರರು ನಮ್ಮ ಸಂಪರ್ಕದಲ್ಲಿ ಕಾಂಗ್ರೆಸ್‌ನ 22 ಶಾಸಕರಿದ್ದಾರೆಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸಚಿವರ ಹೇಳಿಕೆ ಬಗ್ಗೆ ಡಿಕೆಶಿ ಹರಿತ ಶಬ್ದಗಳಲ್ಲಿ ಕುಟುಕಿದ್ದಾರೆ.
ಇದನ್ನೂ ಓದಿ:ಇನ್ನು ಮೂರು ತಿಂಗಳವರೆಗೆ ಶಾಲೆ ತೆರೆಯಬೇಡಿ: ಸಿದ್ದರಾಮಯ್ಯ ಸಲಹೆ
ಈ ಸಂದರ್ಭದಲ್ಲಿ ನಮ್ಮ ಶಾಸಕರಿಗೆ ಅಗೌರವ ಮಾಡುವುದು ಬೇಡ. ಯಾವ ಮಂತ್ರಿ ಯಾವ ಹೇಳಿಕೆ ನೀಡುತ್ತಿದ್ದಾರೆ, ಯಾವ ಹೊಟೇಲ್ನಲ್ಲಿ ಯಾರು ಸಭೆ ನಡೆಸುತ್ತಿದ್ದಾರೆ, ನಿನ್ನೆ ರಾತ್ರಿ ಯಾರು, ಎಲ್ಲಿ, ಏನು ಸಭೆ ನಡೆಸಿದ್ದಾರೆ ಎಂಬುದನ್ನು ಗಮನಿಸುತ್ತಿದ್ದೇವೆ. ನಾವಿಲ್ಲಿ ಸುಮ್ಮನೆ ಕೂತಿಲ್ಲ ಎಂದರು.
ನಮಗೆ ಬೇರೆಯವರ ಮನೆ ವಿಚಾರ ಬೇಡ. ನಾವುಂಟು ನಮ್ಮ ಮನೆಯುಂಟು, ನಮ್ಮ ಶಾಸಕರುಂಟು. ನಮ್ಮ ಪಕ್ಷದ ನಾಯಕರೂ ಬೇರೆ ಪಕ್ಷದ ಆಂತರಿಕ ವಿಚಾರದ ಬಗ್ಗೆ ಹೇಳಿಕೆ ನೀಡದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದ್ದೇನೆ ಎಂದು ಡಿಕೆಶಿ ಹೇಳಿದರು.
ಇದನ್ನೂ ಓದಿ:ಖರ್ಗೆಗೆ ರಾಜ್ಯಸಭೆ ಟಿಕೆಟ್ ಕೊಡುವಂತೆ ಹೈಕಮಾಂಡ್‌ಗೆ ನಾನೇ ಶಿಫಾರಸು ಮಾಡಿದ್ದೆ: ಸಿದ್ದರಾಮಯ್ಯ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ 15 ದಿನಗಳ ಗಡುವು ನೀಡಿದ ಸುಪ್ರೀಂಕೋರ್ಟ್…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + thirteen =
Remember me
