ಬೆಂಗಳೂರು:ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನಡೆಸುತ್ತಿರುವ ಭಾರತ್​ ಜೋಡೋ ನ್ಯಾಯ್​ ಯಾತ್ರೆಯನ್ನು ಅಸ್ಸಾಂನ ಗುವಾಹಟಿಯಲ್ಲಿ ತಡೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ಬಿಜೆಪಿಯ ಗೂಂಡಾಗಳು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದಿರುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರದ ಫ್ರೀಡಂ ಪಾರ್ಕಿನಲ್ಲಿ ಕಾಂಗ್ರೆಸ್​ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ.
ಬಿಜೆಪಿಯವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ.
ಭಾರತ್‌ ಜೋಡೋ ನ್ಯಾಯ ಯಾತ್ರೆಯ ಮೇಲೆ ನಡೆದಿರುವ ದಾಳಿ ಖಂಡಿಸಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾತನಾಡಿದೆ.ದೇಶದ ನ್ಯಾಯಕ್ಕಾಗಿ ನಡೆಯುತ್ತಿರುವ ನಮ್ಮ ಯಾತ್ರೆಗೆ ತಡೆಯೊಡ್ಡುವ ಮೂಲಕ ಪ್ರಜಾಪ್ರಭುತ್ವದ ಧ್ವನಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಖಂಡನೀಯ. ನಮ್ಮ ನಾಯಕರಾದ ಶ್ರೀ…pic.twitter.com/BGEGHuVsUE
ಇದನ್ನೂ ಓದಿ:ಎರಡನೇ ಆವೃತ್ತಿಯ ವುಮೆನ್ಸ್​ ಪ್ರೀಮಿಯರ್​ ಲೀಗ್ ವೇಳಾಪಟ್ಟಿ ಪ್ರಕಟ​; ಬೆಂಗಳೂರಿಗೂ ಈ ಬಾರಿ ಆತಿಥ್ಯ
ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ನೂರಾದರೂ ಭಕ್ತಿವೊಂದೇ, ಕರ್ಮ ಹಲವಾದರೂ ನಿಷ್ಠೆವೊಂದೇ, ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸರ್ಕಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಹಜ್ ಸಮಿತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಇದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + twelve =
Remember me
