ತುಮಕೂರು:ರಾಜ್ಯದಲ್ಲಿ ಬಿಸಿಲಿನ ಬೇಗೆಯ ಜೊತೆಗೆ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಬಿಜೆಪಿ-ಜೆಡಿಎಸ್​ ಹಾಗೂ ಕಾಂಗ್ರೆಸ್​ ಪಕ್ಷದ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಶನಿವಾರ (ಏಪ್ರಿಲ್ 13) ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದ ಪ್ರಚಾರ ಕಾರ್ಯದ ವೇಳೆ ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರ್​ಸ್ವಾಮಿ ಮಾಡಿದ್ದ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿರುಗೇಟು ನೀಡಿದ್ದಾರೆ.
ತುಮಕುರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೆ.ಬಿ. ಕ್ರಾಸ್​ನಲ್ಲಿ ಕಾಂಗ್ರೆಸ್​​ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಡಿಸಿಂ ಡಿ.ಕೆ. ಶಿವಕುಮಾರ್​, ಮಾನ್ಯ ಕುಮಾರಸ್ವಾಮಿ ಅವರು ದೇಶದ ಪ್ರಧಾನಿಯಾಗಿದ್ದ ದೇವೇಗೌಡರ ಮಗ. ಈ ಭೂಮಿಲಿ ದೊಡ್ಡ ಸ್ಥಾನ ಹೊತ್ತ ದೊಡ್ಡ ಕುಟುಂಬ. ಎಚ್‌.ಡಿ.ದೇವೇಗೌಡರ ಮನೆಯಲ್ಲಿ ಎಂಎಲ್ಎ, ಎಂಪಿಗಳು ಇದ್ದಾರೆ.
ಇದನ್ನೂ ಓದಿ:ಸಿಎಂ ತವರಿನಲ್ಲಿ ಅಬ್ಬರಿಸಿದ ಪ್ರಧಾನಿ; ನಾನು ಇರೋವರೆಗೂ ಇದು ಅಸಾಧ್ಯ ಎಂದ ಮೋದಿ
ಜನರ ಬದುಕಿಗೆ ಶಕ್ತಿ ಕೊಡಬೇಕು ಅಂತಾ ಜನರಿಗೆ 5 ಗ್ಯಾರಂಟಿ ನೀಡಿದ್ದೇವೆ. ಧೀಮಂತ ಮಹಿಳೆ ಇಂದಿರಾಗಾಂಧಿ ನಿಧನರಾದಾಗ ಮನಸ್ಸಿಗೆ ನೋವಾಗಿತ್ತು. ಅದಾದ ನಂತರ ಇಂದು ಮನಸ್ಸಿಗೆ ದುಃಖವಾಗುತ್ತಿದೆ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದು ವಾಗ್ದಾಳಿ ನಡೆಸಿದ್ದಾರೆ.
ನನ್ನ ತಾಯಂದಿರು, ಅಕ್ಕಂದಿರು, ಅವರ ತಾಯಿಯ ಮನೆಗೆ ಹೋಗೋಕೆ, ಧರ್ಮಸ್ಥಳ, ಕುಕ್ಕೆಗೆ‌ ಹೋಗಲು ಬಸ್‌ ಹಿಡಿದ್ರೆ ದಾರಿ‌ತಪ್ಪಿದ್ದಾರೆ ಅಂತೀರಾ. ನೀವು ನೀಡಿರುವ ಹೇಳಿಕೆ ಯಾರಿಂದಲೂ ಕ್ಷಮಿಸಲು ಆಗಲ್ಲ ಈಗಾಗಲೇ ಹೆಣ್ಣುಮಕ್ಕಳು ಪ್ರತಿಭಟನೆ ಆರಂಭಿಸಿದ್ದಾರೆ. ದೇಶದೆಲ್ಲೆಡೆ ಇವರು ನೀಡಿರುವ ಹೇಳಿಕೆಗೆ ಖಂಡನೆ ವ್ಯಕ್ತವಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − one =
Remember me
