ಕಲಬುರಗಿ:ವರ್ಗಾವಣೆ ದಂಧೆ ಸೇರಿದಂತೆ ಇನ್ಯಾವುದೇ ವಿಚಾರಕ್ಕೆ ಸಂಬಂಧಿಸಿದ ದಾಖಲೆಗಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಿದ್ದರೆ ನಾವೇ ತನಿಖೆ ಮಾಡಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.
ಕಲಬುರಗಿಯಲ್ಲಿ ಈ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್​ ಬೇರೆಯವರನ್ನು ಹೆದರಿಸಿದಂತೆ ನನ್ನನ್ನು ಬೆದರಿಸಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಸಿಎಂ ಎಚ್​ಡಿಕೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಮಾಜಿ ಸಿಎಂ ಎಚ್​ಡಿಕೆ ಪೆನ್​ಡ್ರೈವ್​ ಬಿಡುಗಡೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರ ಬಳಿ ಯಾವುದೇ ದಾಖಲಿಗಳಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ನಾವೆ ತನಿಖೆ ಮಾಡಿಸುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಲೆಲ್ಲಾ ದೇಶ ವಿರೋಧಿ ಚುಟವಟಿಕೆಗಳು ಹೆಚ್ಚಳ: ವಿಜಯೇಂದ್ರ
ಬೇರೆಯವರನ್ನು ಹೆದರಿಸಿದಂತೆ ನನ್ನನ್ನು ಬೆದರಿಸಿದರೆ ಯಾವುದೇ ಪ್ರಯೋಜನವಿಲ್ಲ. ನಾನು ಯಾವುದಕ್ಕೂ ಜಗ್ಗುವುದಿಲ್ಲ. 1975ರಿಂದಲೂ ಈ ರೀತಯ ಅನೇಕ ಬಾಂಬ್​ಗಳನ್ನು ನೋಡಿದ್ದೇನೆ ಎಂದು ಮಾಜಿ ಸಿಎಂ ಎಚ್​ಡಿಕೆ ಆರೋಪಕ್ಕೆ ಟಾಂಗ್​ ಕೊಟ್ಟಿದ್ದಾರೆ.
ಈ ಜನ್ಮದಲ್ಲೂ ಡಿಕೆಶಿ ಅಂತ ತಮ್ಮಾ ಬೇಡ ಎಂಬ ಎಚ್​ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಅವರ ನುಡಿಮುತ್ತುಗಳನ್ನು ಬಹಳ ಸಂತೋಷದಿಂದ ಸ್ವೀಕಾರ ಮಾಡಿದ್ದೀನಿ. ನಾಳೆ ಅಥವಾ ನಾಡಿದ್ದು ಅವರ ಹೇಳಿಕೆ ಹಾಗೂ ಪ್ರಶ್ನೆಗಳಿಗೆ ಉತ್ತರ ಕೊಡೋಣ. ನನ್ನದೂ ಹಿಟ್ ಆ್ಯಂಡ್ ರನ್ ಜಾಯಮಾನವಲ್ಲ ಎಂದು ಮಾಜಿ ಸಿಎಂ ಎಚ್​ಡಿಕೆ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿರುಗೇಟು ನೀಡಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − ten =
Remember me
