ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಪೆನ್​ಡ್ರೈವ್​ ಪ್ರಕರಣ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದು ಕಾಂಗ್ರೆಸ್​ ಹಾಗೂ ಜೆಡಿಎಸ್​ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಪೆನ್​ಡ್ರೈವ್​ ಪ್ರಕರಣ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್​ ಮಾಜಿ ಸಿಎಂ ಎಚ್​ಡಿಕೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್​ ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು, ಕಟ್ಟಿ ಹಾಕಿರುವವರು ಯಾರು ಎಂದು ಪ್ರಶ್ನಿಸಿದ್ದಾರೆ.
ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ. ಈ ವಿಚಾರದಲ್ಲಿ ನಾನು ಏನು ಹೇಳಬೇಕೋ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ ಎಂದು ಹೇಳಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + five =
Remember me
