
ಬೆಂಗಳೂರು:ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.ಪಕ್ಷದ ಕಾರ್ಯಕರ್ತರು, ನಾವು, ನೀವು ಸೇರಿ, ರಾಜ್ಯದ ಜನರು, ಪ್ರತಿ ಹಳ್ಳಿಯಲ್ಲಿರುವವರು ಬಡಿದಾಡಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಎಂದಿಗೂ, ಯಾವತ್ತಿಗೂ ಹೇಳುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ಚ್ೀ ವಿಪ್ ಅಶೋಕ್ ಪಟ್ಟಣ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಪಕ್ಷದಲ್ಲಿ ಆಂತರಿಕವಾಗಿ ಒಂದಷ್ಟು ವಿಚಾರಗಳು ಚರ್ಚೆಯಾಗಿರುತ್ತವೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದನ್ನು ಚರ್ಚೆ ಮಾಡಲು ನಾನು ಹೋಗುವುದಿಲ್ಲ, ನನಗೆ ಇರುವ ಮಾಹಿತಿ ಪ್ರಕಾರ ಆ ರೀತಿ ಚರ್ಚೆ ನಡೆದಿಲ್ಲ ಎಂದರು.
ಶಾಸಕರಿಗೆ ಡಿಕೆಶಿ ತಾಕೀತು:ಅಧಿಕಾರ ಹಂಚಿಕೆ, ಬೆಂಬಲ ಹಾಗೂ ಇತರೆ ವಿಚಾರಗಳ ಬಗ್ಗೆ ಯಾವುದೇ ಶಾಸಕರು ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಸಚಿವ ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.ಪಕ್ಷ ಹಾಗೂ ಸರ್ಕಾರದ ಆಂತರಿಕ ವಿಚಾರಗಳು ಏನೇ ಇದ್ದರೂ ಶಾಸಕರು, ಮುಖ್ಯಮಂತ್ರಿಗಳು ಹಾಗೂ ನನ್ನ ಬಳಿ ಚರ್ಚೆ ಮಾಡಬಹುದು. ಆದರೆ ಯಾವುದೇ ಕಾರಣಕ್ಕೂ ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
