ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಿದ ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ರಾಜಕೀಯ ರೂಪ ಪಡೆದುಕೊಳ್ಳುತ್ತಿರುವಂತೆಯೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿಸರಿಯಾದ ರೀತಿಯಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರ ಬಿಲ್ ಪಾವತಿ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ವಿರುದ್ಧ ಯಾರು ಎಷ್ಟು ಮಾತನಾಡುತ್ತಾರೋ ಮಾತನಾಡಲಿ. ನಾವು ಯಾರ ನಾಲಿಗೆಗೂ ಬೀಗ ಹಾಕುವುದಿಲ್ಲ. ಕಾಮಗಾರಿಗಳು ವ್ಯವಸ್ಥಿತ ರೂಪದಲ್ಲಿ ನಡೆಯಬೇಕು ಎಂದರು.ಈ ಹಿಂದೆ ನಾವು 40 ಪರ್ಸೆಂಟ್ ಕಮಿಷನ್, ಪೇಸಿಎಂ ಅಭಿಯಾನ ಮಾಡಿದ್ದು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕೂಡ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು. ಇನ್ನು ಲೋಕಾಯುಕ್ತ ಸಂಸ್ಥೆ ಕೂಡ ಒಂದೇ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 137 ಕೋಟಿ ರೂ. ಹಣ ಕಾಮಗಾರಿ ಆಗದೇ ಬಿಲ್ ಪಾವತಿ ಮಾಡಲಾಗಿದೆ ಎಂದು ವರದಿ ನೀಡಿದೆ. ನಾವು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ ಎಂದು ಹೇಳಿದರು.ಎಚ್.ಡಿ. ಕುಮಾರಸ್ವಾಮಿ ಅವರು 26 ಅಂಶಗಳ ಬಗ್ಗೆ ಟೀಕೆ ಮಾಡಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ನಾನು ಹಳ್ಳಿಯಿಂದ ಬಂದಿರುವವನು ನನಗೆ ಅವರಷ್ಟು ದೊಡ್ಡ ಅನುಭವವಿಲ್ಲ. ನನ್ನ ಅನುಭವ ಸಣ್ಣದು. ಅದರ ಆಧಾರದ ಮೇಲೆ ನಾನು ಮಾಹಿತಿ ಕೇಳಿದ್ದೇನೆ ಎಂದರು.ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವಾಗ ಯಾವ ಕಾಮಗಾರಿಗೆ ಟೆಂಡರ್ ಆಯಿತು, ಕಾಮಗಾರಿಗೆ ಯಾವಾಗ ಅನುಮತಿ ಸಿಕ್ಕಿತು, ಯಾವಾಗ ಕಾಮಗಾರಿ ಮುಗಿಯಿತು, ಯಾವಾಗ ಬಿಲ್ ಪಾಸ್ ಆಗಿದೆ, ಕಾಮಗಾರಿ ಗುಣಮಟ್ಟ ಹೇಗಿದೆ ಎಂದು ಪರಿಶೀಲನೆ ಮಾಡಬೇಕಿದೆ. 2 ಕೋಟಿ ಕಾಮಗಾರಿಯಲ್ಲಿ 1.99 ಕೋಟಿ ಬಿಲ್ ನೀಡಿದ್ದು ಕೇವಲ 1 ಲಕ್ಷ ಮಾತ್ರ ಬಾಕಿ ಉಳಿಸಿದ್ದಾರೆ. ಇಂತಹ ಸುಮಾರು 25 ಪ್ರಕರಣಗಳಿವೆ. ಈ ಬಗ್ಗೆ ನಾನು ಮಾಹಿತಿ ಪಡೆಯಬೇಕಿದೆ ಎಂದು ತಿಳಿಸಿದರು.ಅಧಿಕಾರಿಗಳು ಈವರೆಗೂ ಎಷ್ಟು ಕಾಮಗಾರಿಗಳ ಮಾಹಿತಿ ನೀಡಿದ್ದಾರೆ ಎಂದು ಕೇಳಿದಾಗ, ಅಧಿಕಾರಿಗಳು ಇನ್ನು ಮಾಹಿತಿ ನೀಡಿಲ್ಲ. ನಾನು ಕೆಲವು ಮಾನದಂಡಗಳನ್ನು ಹಾಕಿದ್ದು, ಅದರ ಮೇಲೆ ಅಧ್ಯಯನ ಮಾಡಿ ವರದಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − 4 =
Remember me
