ಬೆಂಗಳೂರು:ಕರೊನಾ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೋನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು (ಕರೊನಾ ವಾರಿಯರ್ಸ್) ಬಳಸಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಸಿಎಂಗೆ ಪತ್ರ ಬರೆದಿರುವ ಶಿವಕುಮಾರ್, ‘ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಕೋವಿಡ್ ಸಂತ್ರಸ್ತರ ನೆರವಿಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಕ ಜಿಲ್ಲಾ, ತಾಲೂಕು ಹಾಗೂ ಪಂಚಾಯಿತಿ ಮಟ್ಟದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು, ತನು ಮನ ಧನ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದಾರೆ.
‘ನಮ್ಮ ಪಕ್ಷದ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕೆಲಸ ಮಾಡಲು ಸದಾ ಸನ್ನದ್ಧರಾಗಿದ್ದು, ಜನಸೇವೆಗೆ ಲಭ್ಯರಿದ್ದಾರೆ. ಹೀಗಾಗಿ ಸರ್ಕಾರ ಅಧಿಕೃತವಾಗಿ ನಮ್ಮ ಕಾರ್ಯಕರ್ತರಿಗೂ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.
ಮುಸ್ಲಿಂ ಧರ್ಮಗುರುವನ್ನು ಭೇಟಿ ಮಾಡಿದ ಡಿಕೆಶಿ: ಕರೊನಾ ಮುಕ್ತಿಗೆ ಪ್ರಾರ್ಥನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
