ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಬಂದು ಕಬ್ಬಾಳಮ್ಮ ದೇವಿಗೆ ಈಡುಗಾಯಿ ಹರಕೆ ತೀರಿಸಿದ್ದಾರೆ. ಡಿ.ಕೆ.ಶಿವಕುಮಾರ್ ತಲಾ ಏಳು ಈಡುಗಾಯಿ ಒಡೆದಿದ್ದಾರೆ. ಪುತ್ರಿ ಐಶ್ವರ್ಯ ಹಾಗೂ ಅಳಿಯ ಅಮಾರ್ತ್ಯ ಹೆಗ್ಡೆ ತಲಾ ಒಂದೊಂದು ಈಡುಗಾಯಿ ಒಡೆದಿದ್ದಾರೆ.
ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದ್ದಂತೆ ಡಿಕೆ ಶಿವಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಟೆಂಪಲ್ ರನ್ ಮಾಡಿರುವ ಡಿಕೆಶಿ, ಕೆಂಕೇರಮ್ಮ ದೇವಸ್ಥಾನದ ಬಳಿಕ ಕಬ್ಬಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ 500 ರೂಪಾಯಿ ನೋಟಿನ ಕಂತೆ ಕಂತೆ ಹಣವನ್ನು ದೇವಸ್ಥಾನದ ಹುಂಡಿಗೆ ಹಾಕಿದ್ದಾರೆ.
ಇದನ್ನೂ ಓದಿ:ಲಿಂಗಾಯತರೇ ಮುಂದಿನ ಸಿಎಂ ಆಗುತ್ತಾರೆ; ಭವಿಷ್ಯ ನುಡಿದ ಯತ್ನಾಳ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕನಕಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಕೆಂಕೇರಮ್ಮ ದೇವಸ್ಥಾನದಲ್ಲಿ ಕುಟುಂಬಸ್ಥರು ಹಾಗೂ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್​ ನಂತರ ಬೃಹತ್​ ಬೈಕ್​ ರ್‍ಯಾಲಿ ಹಾಗೂ ರೋಡ್​ಶೋ ನಡೆಸಿದರು. ಈ ವೇಳೆ ಅಪಾರ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.
ಇದನ್ನೂ ಓದಿ:ಬಂಗಾಳದ ಕಾರ್ಮಿಕನಿಗೆ ಕೇರಳದಲ್ಲಿ ಒಲಿಯಿತು ಅದೃಷ್ಟ; ಲಾಟರಿಯಲ್ಲಿ ಹಣ ಗೆಲ್ಲುತ್ತಿದ್ದಂತೆ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ!
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಡಿಕೆಶಿ ರಾಜಕಾರಣ ಅನ್ನೋದು ವ್ಯವಸಾಯ ಇದ್ದಂತೆ. ವ್ಯವಸಾಯದಲ್ಲಿ ಹೇಗೆ ಬಿತ್ತನೆ ಹಾಕಿ, ನೀರು ಹಾಕಿ, ಪೋಷಣೆ ಮಾಡಿ ಬೆಳೆ ತಗೀತ್ತಾರೋ ಹಾಗೇ ಬೆಳೆ ಕಟಾವು ಮಾಡುವ ಸಮಯ ಚುನಾವಣೆಯಲ್ಲಿ ಬಂದಿದೆ. ನಾನು 35 ವರ್ಷಗಳ ಕಾಲ ವ್ಯವಸಾಯದಂತೆ ರಾಜಕಾರಣದಲ್ಲಿ ನೂರಾರು ನಾಯಕರನ್ನು ಬೆಳೆಸಿದ್ದೇನೆ ಎಂದರು.
ಇದನ್ನೂ ಓದಿ:ಅತೀ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿಗಳಲ್ಲಿ ಬೊಮ್ಮಾಯಿಗೆ 2ನೇ ಸ್ಥಾನ; ಸಿಎಂ ಆಸ್ತಿ ವಿವರ ಹೀಗಿದೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
