ಬೆಂಗಳೂರು:ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಕ್ಕೆ ಬಿಜೆಪಿ ಟೀಕಿಸುತ್ತಿರುವುದರ ಕುರಿತು ಇಂದು ಕಾಂಗ್ರೆಸ್​ ನಾಯಕರು ಡಿಕೆಶಿ ಪರ ಬ್ಯಾಟ್​ ಬೀಸಿದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಪೊಲಿಟಿಕಲ್​ ಕಾಮಿಡಿ ಸುತ್ತ ‘ಪಾಲಿಟಿಕ್ಸ್​ ಕಲ್ಯಾಣ’ ; ಕವಿ ರಾಜೇಶ್​ ಹೊಸ ರಾಜಕೀಯ ವಿಡಂಬನೆ
“ಸರ್ಕಾರದ ಸೇವೆಯಲ್ಲಿದ್ದವರ ವಿರುದ್ಧ ತನಿಖೆಯಾಗಬೇಕಾದರೆ ಸರ್ಕಾರದ ಅನುಮತಿ ಅವಶ್ಯ. 2019 ರಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆಗೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಅವರ ವಿರುದ್ಧ ತನಿಖೆಗೆ ಕಾನೂನು ರೀತ್ಯವಾಗಿ ವಿಧಾನಸಭಾಧ್ಯಕ್ಷರಿಂದ ಅನುಮತಿ ಪಡೆದು ನಂತರ ಮುಖ್ಯಮಂತ್ರಿಗಳು ತನಿಖೆ ಕೈಗೊಳ್ಳಲು ಆದೇಶಿಸಬೇಕು ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಬಾಕಿ ವೇತನ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
“ಆದ್ರೆ, ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆಯದೆ ಹಾಗೂ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸದೆ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕವಾಗಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಅವರ ಮೌಖಿಕ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಸಿಬಿಐ ತನಿಖೆಗೆ ವಹಿಸಿದ್ದಾರೆ. ಈ ರೀತಿ ಮಾಡುವುದು ಕಾನೂನು ಬಾಹಿರ ಕ್ರಮ” ಎಂದು ಟ್ವೀಟ್​ ಮುಖೇನ ಬಿಜೆಪಿ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.
ಸರ್ಕಾರದ ಸೇವೆಯಲ್ಲಿದ್ದವರ ವಿರುದ್ಧ ತನಿಖೆಯಾಗಬೇಕಾದರೆ ಸರ್ಕಾರದ ಅನುಮತಿ ಅವಶ್ಯ. 2019 ರಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆಗೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಅವರ ವಿರುದ್ಧ ತನಿಖೆಗೆ ಕಾನೂನು ರೀತ್ಯವಾಗಿ ವಿಧಾನಸಭಾಧ್ಯಕ್ಷರಿಂದ ಅನುಮತಿ ಪಡೆದು ನಂತರ ಮುಖ್ಯಮಂತ್ರಿಗಳು ತನಿಖೆ ಕೈಗೊಳ್ಳಲು ಆದೇಶಿಸಬೇಕು. ಆದರೆ…— CM of Karnataka (@CMofKarnataka)November 24, 2023
ಸರ್ಕಾರದ ಸೇವೆಯಲ್ಲಿದ್ದವರ ವಿರುದ್ಧ ತನಿಖೆಯಾಗಬೇಕಾದರೆ ಸರ್ಕಾರದ ಅನುಮತಿ ಅವಶ್ಯ. 2019 ರಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆಗೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಅವರ ವಿರುದ್ಧ ತನಿಖೆಗೆ ಕಾನೂನು ರೀತ್ಯವಾಗಿ ವಿಧಾನಸಭಾಧ್ಯಕ್ಷರಿಂದ ಅನುಮತಿ ಪಡೆದು ನಂತರ ಮುಖ್ಯಮಂತ್ರಿಗಳು ತನಿಖೆ ಕೈಗೊಳ್ಳಲು ಆದೇಶಿಸಬೇಕು. ಆದರೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 9 =
Remember me
