ರಾಮನಗರ:ಕನಕಪುರದ ವಿಧಾನಸಭಾ ಕ್ಚೇತ್ರದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಸಿ ಹೊಸ ಟ್ವಸ್ಟ್​ ನೀಡಿದ್ದಾರೆ. ಡಿ.ಕೆ ಶಿವಕುಮಾರ್ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆ ಸುರೇಶ್ ಕನಕಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಂತೋಷ್​ಗೆ ನಾಮಪತ್ರ ಸಲ್ಲಿಸಿದ್ದಾರೆ

ಈ ಹಿಂದೆ ಡಿಕೆ ಸುರೇಶ್ ಪದ್ಮನಾಭ ನಗರದಲ್ಲಿ ನಾಮಪತ್ರ ಸಲ್ಲಿಸುತ್ತಾರಾ ಎಂಬ ಪ್ರಶ್ನೆ ಎದ್ದಿತ್ತು. ಆರ್, ಅಶೋಕ್​ಗೆ ಕೌಂಟರ್​ ನೀಡುವ ಲೆಕ್ಕಾಚಾರದಲ್ಲಿ ಅಲ್ಲಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿತ್ತು.
ಅದಲ್ಲದೇ ಇಂದು ಡಿಕೆಶಿ ಕೂಡ 1 ಗಂಟೆವರೆಗೆ ಕಾದು ನೋಡಿ ಎಂದು ಹೇಳಿ ಮತ್ತೆ ಕುತೂಹಲ ಮೂಡಿಸಿದ್ದರು. ಸಂಸದ ಡಿಕೆ ಸುರೇಶ್ ಸ್ಪರ್ಧೆಯ ಬಗ್ಗೆ ಗುಟ್ಟು ಬಿಟ್ಟುಕೊಡದ ಗುಟ್ಟು ಇದೀಗ ಬಹಿರಂಗವಾಗಿದೆ.
ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗುತ್ತಿದ್ದು ‌ನಿನ್ನೆ ನಡೆದ ಕೆಲ ಬೆಳವಣಿಗೆಗಳ ನಂತರ ಡಿಕೆಶಿಯಿಂದ ಸೂಚನೆ ಬಂದಿದೆ.
ಡಿಕೆ ಶಿವಕುಮಾರ್​ ಸಲ್ಲಿಸಿರುವ ನಾಮಪತ್ರಕ್ಕೆ ತಕರಾರು ಬಂದಿದೆ ಎಂಬ ಮಾಹಿತಿ ಲಭಿಸಿದೆ. ಅದರಲ್ಲೂ ವಿಶೇಷವಾಗಿ ಆಸ್ತಿ ವಿವರಕ್ಕೆ ಸಂಬಂಧಿಸಿದಂತೆ ಕೆಲವರಿಂದ ತಕರಾರು ಬರುವ ಸುಳಿವು ಇದ್ದ ಹಿನ್ನೆಲೆಯಲ್ಲಿ ಆಪ್ತರು ಹಾಗು ಕಾನೂನು ಸಲಹೆಗಾರರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.
ತಕರಾರಿನಿಂದ ಏನಾದರೂ ಸಮಸ್ಯೆ ಆದರೆ ಎಂಬ ಆತಂಕದಲ್ಲಿ ಮುಂಜಾಗ್ರತಾ ಕ್ರಮವಾಗಿ ಸಹೋದರನಿಂದ ನಾಮಪತ್ರ ಸಲ್ಲಿಕೆ ಮಾಡಲಾಗಿದೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 6 =
Remember me
