ರಾಮನಗರ:ಕನಕಪುರದಿಂದ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ಸೂಚನೆ ನೀಡಿತ್ತು. ಕೆಲವೊಂದು ಕುತಂತ್ರಗಳು ನಡೆಯುತ್ತಿದೆ ಎಂದು ಗೊತ್ತಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಮ ಪಾತ್ರ ಸಲ್ಲಿಕೆ ಮಾಡಿದ್ದೇನೆ ಎಂದು ಡಿ.ಕೆ. ಸುರೇಶ್​ ಅವರು ಹೇಳಿದರು.
ಕನಕಪುರದಲ್ಲಿ ನಾಮಪತ್ರ ಸಲ್ಲಿಸಿರುವುದರ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಿಕೆ ಸುರೇಶ್, ಡಿ.ಕೆ. ಶಿವಕುಮಾರ್ ಅವರ ಮೇಲೆ ಸಾಕಷ್ಟು ಕಣ್ಣುಗಳು ಬಿದ್ದಿವೆ. ವಾಮಮಾರ್ಗದಿಂದ ಡಿಕೆಶಿಯನ್ನು ಮಣಿಸಲು ಬಿಜೆಪಿ ಪ್ಲಾನ್ ಮಾಡಿದೆ. ಡಿಕೆಶಿಯನ್ನು ಬಂಧಿಸುವುದು, ನೋಟಿಸ್ ನಿಡುವುದನ್ನು ನಿವೆಲ್ಲ ನೋಡಿದ್ದೀರಿ. ನಾಲ್ಕು ದಿನದ ಹಿಂದೆ ಕೂಡ ಚೆನೈನಿಂದ ಐಟಿ ಅವರು ನೋಟಿಸ್ ನೀಡಿದರು. ಖುದ್ದು ನೀವೆ ಹಾಜರಾಗಬೇಕು ಎಂದು ಹೇಳಿದ್ದಾರೆ ಎಂದರು.
ಇದನ್ನೂ ಓದಿ:ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ ಡಿಕೆ ಸುರೇಶ್!
ಚುನಾವಣೆ ಆದ್ಮಲೇ ನಾವು ಬರ್ತೇವೆ ಎಂದು ಐಟಿ ಅವರಿಗೆ ಹೇಳಿದ್ದೇವೆ. ಅನವಶ್ಯಕವಾಗಿ ನಾವು ಬರೋದಿಲ್ಲ ಎಂದು ಹೇಳಿದ್ದೇವೆ. ನಮ್ಮ ಮೇಲಿನ ಕೇಸ್​ಗಳ ಮೇಲೆ ಎಲ್ಲ ಕಡೆ ತಡೆಯಾಜ್ಞೆಗಳು ಇವೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಡಿಕೆಶಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಅವರು ಮೊದಲೇ ಹೇಳಿದ್ದಾರೆ. ಟಿಕೆಟ್ ಘೋಷಣೆ ಮಾಡುವ ವೇಳೆ ಡಿಕೆಶಿಗೆ ಟಕ್ಕರ್ ಕೊಡ್ತೀನಿ ಅಂತಾ ಹೇಳಿದ್ದಾರೆ. ನಾವು ಕೂಡ ಮುಂಜಾಗ್ರತಾ ಕ್ರಮವಾಗಿ ರೆಡಿಯಾಗಿದ್ದೇವೆ. ಬಿಜೆಪಿ ಅವರು ಏನು ಮಾಡಿದ್ರೂ ಸಹ ಏನು ಆಗುವುದಿಲ್ಲ. ಅವರು ನಾಮ ಪತ್ರ ರಿಜೆಕ್ಟ್ ಮಾಡಿಸುತ್ತಾರೆ ಅನ್ನೋ ಅನುಮಾನ ಇದೆ. ಇದು ನನ್ನ ಮತ ಕ್ಷೇತ್ರ. ಏನೇ ಕುತಂತ್ರ ಮಾಡಿದ್ರು ಜನ ಅದಕ್ಕೆ ಉತ್ತರ ಕೊಡ್ತಾರೆ ಎಂದು ಡಿ.ಕೆ. ಸುರೇಶ್​ ಹೇಳಿದರು.(ದಿಗ್ವಿಜಯ ನ್ಯೂಸ್​)
‘ಸಿದ್ದರಾಮಯ್ಯರನ್ನ ನೋಡಿದ್ರೆ ನಗು ಬರುತ್ತೆ..18 ತುಂಬದ ಮೊಮ್ಮಗನ ಜತೆ ಪ್ರಚಾರಕ್ಕೆ ಬರುತ್ತಿದ್ದಾರೆ’: ಪ್ರತಾಪ್ ಸಿಂಹ ವ್ಯಂಗ್ಯ

‘ಮಳೆಯಲ್ಲಿ ಸಾಂಗ್​ ಶೂಟಿಂಗ್​ ವೇಳೆ ಒಳ ಉಡುಪು ಧರಿಸಿರಲಿಲ್ಲ: ಮೇಲಕ್ಕೆತ್ತಿದಾಗ ರಜನಿ ಸರ್ ಗಲಿಬಿಲಿಗೊಂಡಿದ್ದರು’

ಮಹಿಳೆಯರ ಖಾಸಗಿ ಅಂಗಗಳ ಬಗ್ಗೆ ಮಾತಾಡಿದ್ರೆ ಗುಂಡು ಹಾರಿಸುತ್ತೇನೆಂದ ನಟಿ ರಾಧಿಕಾ ಆಪ್ಟೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 + 5 =
Remember me
