ಬೆಂಗಳೂರು:ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ‌ ಹೀಗೆ ಹೇಳಿರಬಹುದು ಎಂದು ಸಂಸದ ಡಿ.ಕೆ. ಸುರೇಶ್​ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ.
ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿಯವರನ್ನು ಒತ್ತಾಯಿಸುತ್ತೇನೆ ಎಂಬ ಮಾಜಿ ಸಚಿವ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸುರೇಶ್​ ಅವರ ಮನೆಗೆ ನಾನೇ ಹೋಗುತ್ತೇನೆ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ ಬೆನ್ನಲ್ಲೇ ಎನ್​​ಸಿಪಿ ಸೇರ್ಪಡೆಯಾದ ಬಾಬಾ ಸಿದ್ದಿಕ್​
ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ‌ ಹೀಗೆ ಹೇಳಿರಬಹುದು. ಇಂತಹ ಹೇಳಿಕೆ ನೀಡುವ ಮೂಲಕ ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳುತ್ತೀರಿ. ನಾನೇ ಸಮಯ ಕೊಡುತ್ತೇನೆ. ಒಂದು ವಾರದಲ್ಲಿ ಯಾವಾಗ ಎಂದೂ ಹೇಳುತ್ತೇನೆ. ನಾನೇ ಈಶ್ವರಪ್ಪ ಅವರ ಮನೆಗೆ ಹೋಗುತ್ತೇನೆ. ಅವರೇ ನನಗೆ ಗುಂಡು ಹೊಡೆಯಲಿ.‌
ಬಡವರ ಮಕ್ಕಳನ್ನು  ಅವರು ರೊಚ್ಚಿಗೆಬ್ಬಿಸುವುದು ಬೇಡ‌. ಅವರೇ ಆ ಕೆಲಸ ಮಾಡಲಿ. ಬಿಜೆಪಿಯಲ್ಲಿ ಈಶ್ವರಪ್ಪ ಅವರನ್ನು ಮೂಲೆಗುಂಪು ಮಾಡಿದ್ದಾರೆ. ಪಕ್ಷದ ನಾಯಕರ ಗಮನ ಸೆಳೆಯಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಈಶ್ವರಪ್ಪ ಹೇಳಿಕೆಗೆ​ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
